ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದು ತುಂತುರು ಮಳೆಯಾಗಲಿದೆ. ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದರಿಂದ ಮುಂದಿನ ತಿಂಗಳ ಮಧ್ಯ ಭಾಗದವರೆಗೂ ಮಳೆ, ಚಳಿಯ ಕಣ್ಣಾಮುಚ್ಚಾಲೆ ಆಟ ಮುಂದುವರೆಯಲಿದೆ. ಈ ವರ್ಷ ಕರ್ನಾಟಕ (Karnataka Rain) ಮತ್ತು ಕೇರಳದಂತಹ ರಾಜ್ಯಗಳಲ್ಲಿ ಮಳೆ ಕೈ ಕೊಟ್ಟಿದೆ. ಇದಕ್ಕೆ ವ್ಯತಿರಿಕ್ತವಾಗಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಸರಾಸರಿಗಿಂತ ಎರಡು ಪಟ್ಟು ಹೆಚ್ಚು ಮಳೆಯಾಗಿದೆ. ಹವಾಮಾನ ಬದಲಾವಣೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿ ಜನರನ್ನು ಎಚ್ಚರಿಸಿದ್ದಾರೆ. ದೀರ್ಘಕಾಲದ ಮಾನ್ಸೂನ್ (Monsoon) ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೊರೊನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ನಾಗರಿಕರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜನವರಿಯಲ್ಲಿ ದಕ್ಷಿಣ ಭಾರತದಲ್ಲಿ ಮಳೆಯು ಅತ್ಯಲ್ಪವಾಗಿದೆ ಮತ್ತು ಇಡೀ ಪರ್ಯಾಯ ದ್ವೀಪವು ವರ್ಷದ ಮೊದಲ ತಿಂಗಳಲ್ಲಿ ಸರಾಸರಿ 10 ಮಿ.ಮೀಗಿಂತ ಕಡಿಮೆ ಮಳೆಯಾಗಲಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮ ಉಂಟಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳು ಇಂದು ತೀವ್ರ ಶೀತ ಅಲೆಯ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ಮುನ್ಸೂಚನೆ ನೀಡಿದೆ. ಫೆಬ್ರವರಿ 2 ಮತ್ತು 4ರ ನಡುವೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಲಿದೆ. ಫೆಬ್ರವರಿ 5ರವರೆಗೆ ಶೀತ ಅಲೆ ಮತ್ತು ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ (ಮಹಾರಾಷ್ಟ್ರದಲ್ಲಿ), ಮತ್ತು ಛತ್ತೀಸ್‌ಗಢದಲ್ಲಿ ಚಳಿಯಿಂದ ತೀವ್ರ ಚಳಿಯ ದಿನ ಪರಿಸ್ಥಿತಿಗಳು ಇರಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಜನವರಿ 31 ಮತ್ತು ಫೆಬ್ರವರಿ 1ರಂದು ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಈ ವಾರ ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದ್ದು, ಮುಂದಿನ ವಾರವೂ ಇದೇ ಮಾದರಿ ಮುಂದುವರಿಯುವ ಸಾಧ್ಯತೆಯಿದೆ. ಕೊಚ್ಚಿ ಮತ್ತು ಚೆನ್ನೈ ಮುಂದಿನ ಕೆಲವು ದಿನಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯಾಗಲಿದೆ. ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇಂದು ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ವಿದರ್ಭ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಉಂಟಾಗುವ ನಿರೀಕ್ಷೆಯಿದೆ.
ತಮಿಳುನಾಡು ಮತ್ತು ಕೇರಳ ಫೆಬ್ರವರಿ 1ರವರೆಗೆ ಮುಂದಿನ ನಾಲ್ಕು ದಿನಗಳಲ್ಲಿ ಲಘು ಮಳೆಗೆ ಸಾಕ್ಷಿಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಫೆಬ್ರವರಿ 2 ಮತ್ತು 4ರ ನಡುವೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಸಾಧಾರಣ ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ. ಫೆಬ್ರವರಿ 3ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಬೀಳುವ ಸಾಧ್ಯತೆಯಿದೆ.
ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಫೆ. 3 ಮತ್ತು 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Karnataka Weather Today: ಬೆಂಗಳೂರು, ಕೋಲಾರ ಸುತ್ತಮುತ್ತ ಇನ್ನೆರಡು ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ
Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ