Karnataka Weather Today: ರಾಜ್ಯಾದ್ಯಂತ ನ. 20ರವರೆಗೆ ಮಳೆ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಇಂದಿನಿಂದ 4 ದಿನ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆದರೆ, ಕಳೆದ ವಾರಕ್ಕೆ ಹೋಲಿಸಿದರೆ ಇಂದಿನಿಂದ ಮಳೆ ಕೊಂಚ ತಗ್ಗಲಿದೆ.

Karnataka Weather Today: ರಾಜ್ಯಾದ್ಯಂತ ನ. 20ರವರೆಗೆ ಮಳೆ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಮಳೆ
Edited By:

Updated on: Nov 17, 2021 | 7:02 AM

Bengaluru Rain: ಕರ್ನಾಟಕದ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಇಂದಿನಿಂದ ನವೆಂಬರ್ 20ರವರೆಗೆ ಮಳೆ ಹೆಚ್ಚಾಗಲಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕಳೆದ ವಾರದಲ್ಲಿ ಬೆಂಗಳೂರು ನಗರದಲ್ಲಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 6-7 ಡಿಗ್ರಿಗಳಷ್ಟು ಕಡಿಮೆಯಾಗಿದ್ದು, ನವೆಂಬರ್ ಆರಂಭದಿಂದಲೂ ಚಳಿಗಾಳಿ ಹೆಚ್ಚಾಗಿದೆ.

ಇಂದಿನಿಂದ 4 ದಿನ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆದರೆ, ಕಳೆದ ವಾರಕ್ಕೆ ಹೋಲಿಸಿದರೆ ಇಂದಿನಿಂದ ಮಳೆ ಕೊಂಚ ತಗ್ಗಲಿದೆ. ಇಂದು ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ತುಮಕೂರಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಚೆನ್ನೈ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ತಿರುವಳ್ಳೂರ್‌ಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಇಂದು ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ. ತಮಿಳುನಾಡಿನ ವೆಲ್ಲೂರು, ರಾಣಿಪೇಟ್, ತಿರುವಣ್ಣಾಮಲೈ, ಕಲ್ಲಕುರಿಚಿ, ವಿಲ್ಲುಪುರಂ, ಮೈಲಾಡುತುರೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ನವೆಂಬರ್ 18ರಂದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಸಂಸ್ಥೆಯ ಪ್ರಕಾರ, ವಾರದಲ್ಲಿ ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಒಂದು ವಾರದಿಂದ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

ವಾಯುಭಾರ ಕುಸಿತದ ಪ್ರಭಾವದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಶುಕ್ರವಾರದವರೆಗೆ ಭಾರೀ ಮಳೆ ಸುರಿಯಲಿದೆ. ತಮಿಳುನಾಡು, ಕೇರಳ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ಆಂಧ್ರಪ್ರದೇಶ ಮತ್ತು ದಕ್ಷಿಣ ಗೋವಾ ಸೇರಿದಂತೆ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಲಘುವಾಗಿ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Tamil Nadu rains ತಮಿಳುನಾಡಿನಾದ್ಯಂತ ಮುಂದುವರಿದ ಮಳೆ: ಚೆನ್ನೈ ಮತ್ತು ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Bengaluru Rain: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ