Karnataka Weather Today: ಮಲೆನಾಡು, ಕರಾವಳಿಯಲ್ಲಿ ಹಿಂಗಾರು ಮಳೆಯಿಂದ ಹಳದಿ ಅಲರ್ಟ್ ಘೋಷಣೆ

Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಮಲೆನಾಡು, ಕರಾವಳಿಯಲ್ಲಿ ಹಿಂಗಾರು ಮಳೆಯಿಂದ ಹಳದಿ ಅಲರ್ಟ್ ಘೋಷಣೆ
ಮಳೆ
Follow us
| Updated By: ಆಯೇಷಾ ಬಾನು

Updated on: Nov 02, 2021 | 6:44 AM

Karnataka Rain: ಕರ್ನಾಟಕದಲ್ಲಿ ಹಿಂಗಾರು ಮಳೆಯ ಅಬ್ಬರ ಶುರುವಾಗಿದ್ದು, ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ ನವೆಂಬರ್ 5ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹಿಂಗಾರು ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಮಳೆಯಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನ. 3 ಮತ್ತು ನ. 5ರಂದು ಹಳದಿ ಅಲರ್ಟ್‌ ಹಾಗೂ ನ. 4ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನ. 4ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನವೆಂಬರ್‌ 4ರಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ನ. 3ರಿಂದ ನ. 5ರವರೆಗೆ ಗುಡುಗು ಸಿಡಿಲು ಸಹಿತ ಮಳೆ, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ತ್ರಿಶೂರ್, ಪಾಲಕ್ಕಾಡ್, ಕೋಳಿಕ್ಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಶ್ರೀಲಂಕಾ ಕರಾವಳಿಯ ದಕ್ಷಿಣ-ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದಾಗಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇಂದು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮೆ, ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

ತಮಿಳುನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಒಡಿಶಾ, ಛತ್ತೀಸ್‌ಗಢ, ಸಿಕ್ಕಿಂ, ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ 3 ದಿನಗಳ ಕಾಲ ಕೇರಳದ ವಿವಿಧ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ನವೆಂಬರ್ 3ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತನ್ನ ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ. ನವೆಂಬರ್ 3ರವರೆಗೆ ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು- ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನವೆಂಬರ್ 5ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ದಕ್ಷಿಣ ಒಳನಾಡಿನ ಕರ್ನಾಟಕ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ಇದೆ. ತೆಲಂಗಾಣ ಮತ್ತು ಕರಾವಳಿ ಕರ್ನಾಟಕದಲ್ಲಿ ನವೆಂಬರ್ 5 ರವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Dam Water Level: ಇಂದಿನಿಂದ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕೊಡಗು, ಶಿವಮೊಗ್ಗ, ಮೈಸೂರು ಸೇರಿ 6 ಜಿಲ್ಲೆಗಳಲ್ಲಿ ಭಾರೀ ಮಳೆ; ನಾಳೆಯಿಂದ ಹಳದಿ ಅಲರ್ಟ್ ಘೋಷಣೆ