AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಒಣ ಹವೆ

Karnataka Weather:ವರುಣನ ಅಬ್ಬರ ರಾಜ್ಯದಲ್ಲಿ ಕಡಿಮೆಯಾಗಲಿದ್ದು, ಕರಾವಳಿ ಭಾಗದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಸಂಪೂರ್ಣ ಒಣ ಹವೆ ಇರಲಿದೆ.

Karnataka Weather Today: ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಒಣ ಹವೆ
ರಾಜ್ಯದಲ್ಲಿ ಸ್ವಲ್ಪ ಬಿಡುವು ಪಡೆದ ಮಳೆರಾಯ
ಭಾವನಾ ಹೆಗಡೆ
|

Updated on:Oct 31, 2025 | 8:58 AM

Share

ಬೆಂಗಳೂರು, ಅಕ್ಟೋಬರ್​ 31: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ (Weather Forecast) ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ.

ಹೆಚ್ಚಿನ ಪ್ರದೇಶಗಳಲ್ಲಿ ಒಣ ಹವೆ

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 22-24 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:28 am, Fri, 31 October 25

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ