Karnataka Weather: ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಜೋರಾಗಲಿದೆ ಮಳೆ; ಇದು ಮುಂಗಾರಿನ ಸೆಕೆಂಡ್ ಇನ್ನಿಂಗ್ಸ್

Karnataka Weather Today: ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ವಾತಾವರಣ ಕೊಂಚ ತಂಪಾಗಿದ್ದು ಸೆಖೆ ಕಡಿಮೆಯಾಗಿದೆ. ಜುಲೈ 12ರ ತನಕವೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಕೊಡಗು ಭಾಗದಲ್ಲಿ ರೆಡ್​ ಆಲರ್ಟ್ ಘೋಷಣೆಯಾಗಿದೆ.

Karnataka Weather: ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಜೋರಾಗಲಿದೆ ಮಳೆ; ಇದು ಮುಂಗಾರಿನ ಸೆಕೆಂಡ್ ಇನ್ನಿಂಗ್ಸ್
ಹವಾಮಾನ ವರದಿ
Follow us
TV9 Web
| Updated By: Skanda

Updated on:Jul 10, 2021 | 8:02 AM

ಬೆಂಗಳೂರು: ಕರ್ನಾಟಕದಲ್ಲಿ ಜೂನ್​ ತಿಂಗಳ ಆರಂಭದಲ್ಲಿ ಅಬ್ಬರಿಸಿ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಮುಂದಿನ ಎರಡು ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಇಂದಿನಿಂದ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇನ್ನೆರಡು ದಿನ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್​ ತಿಳಿಸಿದ್ದಾರೆ. ಈ ಬಾರಿ ಬೇಸಿಗೆಯಿಂದಲೇ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತಾದರೂ ಮುಂಗಾರು ಪ್ರವೇಶದ ನಂತರ ಮೊದಲ ಒಂದೆರೆಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕ್ಷೀಣವಾಗಿತ್ತು. ಆದರೆ, ಇದೀಗ ಮತ್ತೆ ವರುಣ ಪುನಾರಾಗಮನ ಮಾಡುವಂತೆ ತೋರುತ್ತಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿರುವುದರಿಂದ ಜುಲೈ 15 ರವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಾರಿ ಮಳೆಯಾಗುವ ಸೂಚನೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಸಹಾಯವಾಣಿ ಪ್ರಾರಂಭಿಸಿದೆ. ಪ್ರವಾಹ ಸಂದರ್ಭದಲ್ಲಿ ಸಮಸ್ಯೆ ಕಂಡುಬಂದಲ್ಲಿ ತುರ್ತಾಗಿ ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಿದ್ದು, ಸಹಾಯವಾಣಿ ಕೇಂದ್ರಗಳ 7411896431, 7411896432 ಹಾಗೂ 7411896433 ಸಂಖ್ಯೆಗಳಿಗೆ ಕರೆ ಮಾಡಲು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯ ಭೀಮಾ, ಕಾಗಿಣಾ ನದಿ ದಡದಲ್ಲಿರುವ ಜನರು ನದಿ ಪಾತ್ರದಿಂದ ದೂರವಿರುವಂತೆ ಸೂಚನೆಯನ್ನೂ ನೀಡಲಾಗಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಮುಂದಿನ ಎರಡು ದಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಇನ್ನೂ 2 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ವಾತಾವರಣ ಕೊಂಚ ತಂಪಾಗಿದ್ದು ಸೆಖೆ ಕಡಿಮೆಯಾಗಿದೆ. ಜುಲೈ 12ರ ತನಕವೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಕೊಡಗು ಭಾಗದಲ್ಲಿ ರೆಡ್​ ಆಲರ್ಟ್ ಘೋಷಣೆಯಾಗಿದೆ. ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ಕೆಲ ಭಾಗಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ವರ್ಷ ನೈರುತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೆಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತದ ಪೂರ್ವ ಭಾಗ ಮತ್ತು ಈಶಾನ್ಯ ಭಾಗದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತನಕ ದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ

Published On - 8:02 am, Sat, 10 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ