Karnataka Rain: ಕರ್ನಾಟಕದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದ್ದು, ಅ. 28ರವರೆಗೂ ವರುಣನ ಆರ್ಭಟವಿರಲಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ ಅತ್ಯಧಿಕ ಮಳೆಯಾಗಲಿದೆ. ರಾಜ್ಯಕ್ಕೆ ಇಂದು ಹಿಂಗಾರು ಮಳೆ ಪ್ರವೇಶವಾಗುವ ಸಾಧ್ಯತೆಯಿದೆ. ಹೀಗಾಗಿ, ಮಳೆಯೂ ಹೆಚ್ಚಾಗಲಿದೆ.
ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ.
ಕರ್ನಾಟಕದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 154.4 ಮಿ.ಮೀ. ಮಳೆ ದಾಖಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಕೂಡ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ, ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ. ಹವಾಮಾನ ತಜ್ಞರ ಪ್ರಕಾರ ಇಂದಿನಿಂದ ಹಿಂಗಾರು ಮಳೆ ಶುರುವಾಗಲಿದೆ. ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಮಳೆ ಹೆಚ್ಚಾಗಲಿದೆ.
ನೈಋತ್ಯ ಮುಂಗಾರಿನಿಂದ 20 ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಬಾರಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳದಾದ್ಯಂತ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ವ್ಯಾಪಕವಾದ ಮಳೆ/ ಹಿಮಪಾತ ಮತ್ತು ಗುಡುಗು ಸಹಿತ ಬಿರುಗಾಳಿ ಉಂಟಾಗಲಿದೆ. ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ ಇದೆ.
ತಮಿಳುನಾಡಿನ ರಾಮನಾಥಪುರಂ, ವಿರುದುನಗರ, ಮಧುರೈ, ತಿರುಚ್ಚಿ, ಕಡ್ಡಲೋರ್, ಪುದುಚೆರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಲಿದೆ.
ಇದನ್ನೂ ಓದಿ: Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 76ಕ್ಕೆ ಏರಿಕೆ; 14 ಜನ ಇನ್ನೂ ನಾಪತ್ತೆ
Karnataka Weather Today: ಬೆಂಗಳೂರು ಸೇರಿ ಬಹುತೇಕ ಕಡೆ ಇಂದಿನಿಂದ ಗುಡುಗು ಸಹಿತ ಭಾರೀ ಮಳೆ