Karnataka Weather Today: ಕರ್ನಾಟಕದಲ್ಲಿ ಅ. 13ರವರೆಗೂ ಮಳೆಯ ಅಬ್ಬರ; ಕರಾವಳಿಯಲ್ಲಿಂದು ಹಳದಿ ಅಲರ್ಟ್ ಘೋಷಣೆ

Karnataka Rain: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಅ. 13ರವರೆಗೆ ಮಳೆ ಮುಂದುವರೆಯಲಿದೆ. ಇಂದು ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಅ. 13ರವರೆಗೂ ಮಳೆಯ ಅಬ್ಬರ; ಕರಾವಳಿಯಲ್ಲಿಂದು ಹಳದಿ ಅಲರ್ಟ್ ಘೋಷಣೆ
ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿರುವುದು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 11, 2021 | 6:40 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಜವಾದ್ ಚಂಡಮಾರುತ ಏಳಲು ಸಜ್ಜಾಗಿದೆ. ಮುಂದಿನ ವಾರ ಈ ಹೊಸ ಚಂಡಮಾರುತ ಶುರುವಾಗುವ ಸಾಧ್ಯತೆಯಿದ್ದು, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 13ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಎರಡು ದಿನಗಳಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಎಡೆಬಿಡದೆ ಮಳೆ ಸುರಿದ ಪರಿಣಾಮ ಅನೇಕ ಅನಾಹುತಗಳಾಗಿವೆ. ಇಂದು ರಾಜ್ಯದಲ್ಲಿ ಮಳೆ ಕೊಂಚ ತಗ್ಗಲಿದ್ದು, ಅ. 12ರಂದು ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅ.12ರಂದು ಮತ್ತೆ ಚುರುಕಾಗಲಿರುವ ಮುಂಗಾರು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್‌, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನು 4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 12ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 4ರಿಂದ 5 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದಿನಿಂದ ಅಕ್ಟೋಬರ್ 12ರ ನಡುವೆ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹೈದರಾಬಾದ್​ನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮಳೆ ನೀರಿನಲ್ಲಿ ಇಬ್ಬರು ಕೊಚ್ಚಿ ಹೋಗಿದ್ದಾರೆ. ತೆಲಂಗಾಣದಲ್ಲಿ ಸುರಿಯುತ್ತಿರುವ ಮಳೆಯಿಂದ ವಿಮಾನ ಹಾರಾಟವೂ ವ್ಯತ್ಯಯವಾಗಿದೆ.

ಅಕ್ಟೋಬರ್ 12ರವರೆಗೂ ಕರ್ನಾಟಕದ ಉತ್ತರ ಒಳನಾಡು ಸೇರಿ ಪುದುಚೇರಿ, ಆಂಧ್ರ ಕರಾವಳಿ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್‌, ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ, ಕೊಂಕಣದಲ್ಲಿ ಗುಡುಗುಮಿಂಚು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು,  ಹಳದಿ ಅಲರ್ಟ್ ಘೋಷಿಸಲಾಗಿದೆ.

ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಕೆಲವು ಭಾಗಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಲ್ಫ್​ ರಾಷ್ಟ್ರಗಳು ಹಾಗೂ ಅಂಡಮಾನ್ ದ್ವೀಪದ ಆಸುಪಾಸಿನಲ್ಲಿರುವ ರಾಷ್ಟ್ರಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ.

ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳದಲ್ಲಿ ಇಂದು ಮಳೆ ಸುರಿಯಲಿದೆ. ರಾಯಸೀಮೆ, ಪಶ್ಚಿಮ ಬಂಗಾಳ, ಗೋವಾ, ಲಕ್ಷದ್ವೀಪ, ಛತ್ತೀಸ್​ಗಢ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತ್ರಿಪುರ, ಮಣಿಪುರ, ಮಿಜೋರಾಂ, ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಲಡಾಖ್, ಪಂಜಾಬ್, ಹರಿಯಾಣ, ಆಂಧ್ರಪ್ರದೇಶದಲ್ಲಿ 3 ದಿನ ಮಳೆಯಾಗಲಿದೆ. ಇಂದು ಮುಂಬೈ, ಅಂಡಮಾನ್, ಜಾರ್ಖಂಡ್, ಬಿಹಾರದಲ್ಲಿ ಹೆಚ್ಚು ಮಳೆಯಾಗಲಿದೆ.

ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕ, ಆಂಧ್ರ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ

Karnataka Weather Today: ಕರ್ನಾಟಕ, ಕೇರಳದಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ

Published On - 6:35 am, Sun, 10 October 21

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ