Karnataka Weather Today: ಸಂಕ್ರಾಂತಿಗೂ ಕಡಿಮೆಯಾಗಿಲ್ಲ ಚಳಿ; ಈ ಜಿಲ್ಲೆಗಳಲ್ಲಿ ಶೀತ ಗಾಳಿ

ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಚಳಿ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Karnataka Weather Today: ಸಂಕ್ರಾಂತಿಗೂ ಕಡಿಮೆಯಾಗಿಲ್ಲ ಚಳಿ; ಈ ಜಿಲ್ಲೆಗಳಲ್ಲಿ ಶೀತ ಗಾಳಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 14, 2023 | 6:43 AM

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಲೇ ಇದೆ. ಇಂದು ಕೂಡ (Karnataka Weather Today) ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮುಂತಾದೆಡೆ ಶೀತ ಗಾಳಿ ಹೆಚ್ಚಾಗಲಿದೆ. ಹಾಗೇ, ಉತ್ತರ ಕರ್ನಾಟಕದಲ್ಲಿ ಕೂಡ ಚಳಿ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಕೂಡ ಚಳಿಗಾಳಿ (Cold Wave) ಹೆಚ್ಚಾಗಿದ್ದು, 4 ವರ್ಷಗಳ ಬಳಿಕ ಕನಿಷ್ಠ ತಾಪಮಾನ ದಾಖಲಾಗಿದೆ. ಸಂಕ್ರಾಂತಿಗೂ ಚಳಿ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಚಳಿ ಶುರುವಾಗಿದೆ. ಶೀತ ಮಾರುತಗಳು ಅಪ್ಪಳಿಸುವುದರಿಂದ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತ ಗಾಳಿ ಬೀಸಲಾರಂಭಿಸಿದೆ. ಇದರಿಂದ ಕರ್ನಾಟಕದಲ್ಲಿ ಚಳಿ ವಿಪರೀತ ಹೆಚ್ಚಾಗಿದೆ.

ಇದನ್ನೂ ಓದಿ: Spicy Ghee Recipe: ಚಳಿಗಾಲದ ಸೋಂಕಿನಿಂದ ಕಾಪಾಡಲು ತುಪ್ಪವನ್ನು ಈ ರೀತಿಯಾಗಿ ಬಳಸಿ

ಬೆಂಗಳೂರು, ಮಲೆನಾಡು ಭಾಗಗಳಲ್ಲಿ ವಿಪರೀತ ಚಳಿ ಶುರುವಾಗಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯಲಿದೆ. ಇಂದು ಉತ್ತರ ಕರ್ನಾಟಕದಲ್ಲಿ ಕೂಡ ಚಳಿ ಗಾಳಿಯ ಅಲೆ ಇರಲಿದೆ. ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಚಳಿ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಇಂದು ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಶೀತ ಅಲೆ ಹೆಚ್ಚಾಗಿರುವುದರಿಂದ ಕನಿಷ್ಠ ಮೂರು ಪದರಗಳ ಬಟ್ಟೆಗಳನ್ನು ಧರಿಸಬೇಕು, ಸಾಧ್ಯವಾದಾಗ ಮನೆಯೊಳಗೇ ಉಳಿಯಬೇಕು, ದೇಹವನ್ನು ಪೂರ್ತಿಯಾಗಿ ಕವರ್ ಮಾಡಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ

ಈ ಚಳಿ ಗಾಳಿ ಇತರ ಆರೋಗ್ಯ ಸಮಸ್ಯೆಗಳಾದ ಮೂಗು ಸೋರುವಿಕೆ, ಅಸ್ತಮಾ ಹದಗೆಡುವುದು, ಜ್ವರದ ಲಕ್ಷಣಗಳು ಮತ್ತು ಚರ್ಮದ ತುರಿಕೆ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಶೀತ ಅಲೆಯಿಂದ ಶಿಶುಗಳು, ಗರ್ಭಿಣಿ ಮಹಿಳೆ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ವೃದ್ಧರು ಮುಂತಾದವರಿಗೆ ಹೆಚ್ಚಿನ ಸಮಸ್ಯೆ ಉಂಟಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿವಿಧ ರಾಜ್ಯಗಳ ಇಂದಿನ ಹವಾಮಾನ ಹೀಗಿದೆ: ಇಂದು ಅರುಣಾಚಲ ಪ್ರದೇಶದಲ್ಲಿ ಅಲ್ಲಲ್ಲಿ ಹಿಮಪಾತವಾಗಲಿದೆ. ಅಸ್ಸಾಂನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ವಾಯು ಗುಣಮಟ್ಟವು ಉತ್ತರ, ಮಧ್ಯ, ಪೂರ್ವ, ಪಶ್ಚಿಮ, ದಕ್ಷಿಣ ಮತ್ತು ಈಶಾನ್ಯ ಭಾರತದಲ್ಲಿ ಕಳಪೆಯಾಗಿರುವ ಸಾಧ್ಯತೆಯಿದೆ. ಉತ್ತರ ಭಾರತದಲ್ಲಿ ತಾಪಮಾನ ಕುಸಿಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್