Karnataka Weather Today: ಇನ್ನೂ 1 ವಾರ ಕರ್ನಾಟಕದಾದ್ಯಂತ ಚಳಿ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ

Weather Forecast: ಇನ್ನೂ 1 ವಾರ ರಾಜ್ಯಾದ್ಯಂತ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ.

Karnataka Weather Today: ಇನ್ನೂ 1 ವಾರ ಕರ್ನಾಟಕದಾದ್ಯಂತ ಚಳಿ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ
ದೆಹಲಿಯಲ್ಲಿ ದಟ್ಟ ಮಂಜು
Follow us
| Updated By: ಸುಷ್ಮಾ ಚಕ್ರೆ

Updated on: Jan 20, 2023 | 6:42 AM

Bengaluru Weather Updates: ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಚಳಿ ಹೆಚ್ಚಾಗಿದೆ. ಕಳೆದ ವರ್ಷಗಳಿಗಿಂತಲೂ ಈ ಬಾರಿ ಚಳಿ ಹೆಚ್ಚಿದೆ. ಫೆಬ್ರವರಿ ಮೊದಲ ವಾರದವರೆಗೂ ಚಳಿ ಮುಂದುವರೆಯುವ ನಿರೀಕ್ಷೆಯಿದೆ. ಇನ್ನೂ 1 ವಾರ ರಾಜ್ಯಾದ್ಯಂತ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ (Bangalore Weather Today) ಮೂರ್ನಾಲ್ಕು ದಿನಗಳಿಂದ ದಟ್ಟವಾದ ಮಂಜು ಆವರಿಸಿದೆ.

ಬೆಂಗಳೂರಿನಲ್ಲಿ ನಿನ್ನೆ (ಗುರುವಾರ) ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಾರಾಂತ್ಯದ ವೇಳೆಗೆ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ಗೆ ಏರಲಿದೆ. ಕರ್ನಾಟಕದ ಉತ್ತರ ಒಳನಾಡಿನ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಇಂದಿನಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್

ಈ ವಾರವಿಡೀ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಇಂದು ಮಲೆನಾಡು, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿಯ ಜೊತೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ 9ರಿಂದ 13 ಡಿಗ್ರಿ ಸೆಲ್ಸಿಯಸ್ ಇದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಭಾಗದಲ್ಲಿ ಶೀತ ಗಾಳಿ ಶುರುವಾಗಿದೆ.

ಇದನ್ನೂ ಓದಿ: Intense Cold Wave: ಇಂದಿನಿಂದ 3 ದಿನ ದೆಹಲಿಯಲ್ಲಿ ಶೀತಮಾರುತ: ಬೆಂಗಳೂರಿನಲ್ಲೂ ಕುಸಿದ ಉಷ್ಣಾಂಶ

ಇಂದು ಬೇರೆ ರಾಜ್ಯಗಳಲ್ಲಿ ಹವಾಮಾನ ಹೇಗಿದೆ?: ಇಂದು ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಚದುರಿದ ಹಿಮಪಾತ ಅಥವಾ ಮಳೆಯ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶದಲ್ಲಿ ಹಿಮ ಅಥವಾ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್‌ನಲ್ಲಿ ಕೂಡ ಮಳೆಯಾಗಬಹುದು. ಅಸ್ಸಾಂ, ಮೇಘಾಲಯ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಒಡಿಶಾ, ಪೂರ್ವ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ