AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ಸೆ. 9ರವರೆಗೂ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain Today: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಸೆ. 9ರವರೆಗೂ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಮಳೆ
TV9 Web
| Edited By: |

Updated on: Sep 07, 2021 | 6:25 AM

Share

Karnataka Rains | ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ (Karnataka Rain) ಸುಮಾರು 1 ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ (Coastal Karnataka Rain) ಇಂದು ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ವಿದರ್ಭ, ಛತ್ತೀಸ್​ಗಢದಲ್ಲೂ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಕೆಲವು ಕಡೆ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಸೆ. 7ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಇಂದು ಭಾರಿ ಮಳೆಯಾಗುವ ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್​ನಿಂದ ಭೀಮಾ ನದಿಗೆ 13,000 ಕ್ಯೂಸೆಕ್ಸ್​ ನೀರು ಬಿಡಲಾಗಿದೆ.

ಇನ್ನು ಮೂರು ದಿನ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೊಂಕಣ, ಗುಜರಾತ್, ರಾಜಸ್ಥಾನದಲ್ಲಿ ಸೆ. 10ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ವಿಪರೀತ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ

Karnataka Rain Today: ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

(Karnataka weather Today Orange Alert issued in Coastal Districts in September 7 as Heavy Rainfall Karnataka Rain)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!