Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ; ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್

Karnataka Rain | ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕೂಡ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ; ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್
ಮಳೆ
Follow us
TV9 Web
| Updated By: Vinay Bhat

Updated on: Sep 24, 2021 | 7:01 AM

Karnataka Rain: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಅತ್ತ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಡ್ಯಾಂಗಳು ತುಂಬಿ ನಿಂತಿವೆ. ರಾಜ್ಯಾದ್ಯಂತ ಇಂದು ಮತ್ತು ನಾಳೆ ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕರ್ನಾಟಕದಲ್ಲಿ ಮಳೆ ಸುರಿಯುತ್ತಲೇ ಇದೆ. ಮುಖ್ಯವಾಗಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕೂಡ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿಯಾಗಿದ್ದು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡುಗು- ಸಿಡಿಲು ಸಹಿತ ಮಳೆಗೆ ಜನರು ಕಂಗಾಲಾಗಿದ್ದಾರೆ. ಈ ಭಾಗದಲ್ಲಿ ವಿದ್ಯುತ್ ಸಂಪರ್ಕವೂ ವ್ಯತ್ಯಯವಾಗಿದ್ದು, ಮನೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಸೆಪ್ಟೆಂಬರ್ 26ರವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಗುಜರಾತ್​ನಲ್ಲಿ ಇಂದಿನಿಂದ 2 ದಿನ ವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆಯ ಬಳಿಕ ಮಳೆಯಾಗುವ ನಿರೀಕ್ಷೆಯಿದೆ. ವಿಜಯಪುರ, ಬಳ್ಳಾರಿಯಲ್ಲೂ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ನಿನ್ನೆಯಿಂದ ವಿಪರೀತ ಮಳೆಯಾಗುತ್ತಿದೆ. ಒರಿಸ್ಸಾ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್​ಗಢ, ತಮಿಳುನಾಡು, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ

(Karnataka weather Today Orange Alert Issued in Malnad and Coastal Karnataka Rain Bengaluru Rain on Friday)