ಬೆಂಗಳೂರು: ಕರ್ನಾಟಕದ ಬಹುತೇಕ ಭಾಗಗಳ ಹವಾಮಾನ ಕಳೆದೊಂದು ವಾರದಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿರು ಬೇಸಿಗೆ ಮರೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ. ಮಲೆನಾಡು ಭಾಗದಲ್ಲಿ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಆರಂಭವಾಗಿದ್ದು, ದಟ್ಟ ಮೋಡ ಕವಿದಿರುವ ಕಾರಣ ಮಧ್ಯಾಹ್ನದ ವೇಳೆಗೆ ತುಸು ಜೋರಾಗಿ ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಇನ್ನು ಬೆಂಗಳೂರಿಗರಿಗೂ ಇಂದು ವರುಣ ದರ್ಶನವಾಗುವ ಸಂಭವವಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ಬಿಸಿಲಿನ ತಾಪ ಇರಲಿದ್ದು, ಸಂಜೆ ವೇಳೆಗೆ ಕೊಂಚ ಚಳಿ ಕಾಣಿಸಿಕೊಳ್ಳಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್, ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ
ಮಂಗಳೂರು: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಉಡುಪಿ: ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: ಗರಿಷ್ಠ27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಬೀದರ್: ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಕಲಬುರಗಿ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ:
ಮೇ 20ರ ವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಬೆಳಗಾವಿಯಲ್ಲಿ ವಿಮಾನ ಹಾರಾಟ ರದ್ದು
Published On - 8:43 am, Wed, 19 May 21