Karnataka Weather Today: ಕರ್ನಾಟಕದಲ್ಲಿ ಮಳೆ ಇಳಿಮುಖ; ಈ ರಾಜ್ಯಗಳಲ್ಲಿ ಡಿ. 25ರವರೆಗೆ ಮಳೆ, ಹಿಮಪಾತ

Karnataka Rain: ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ನಂತರದ 24 ಗಂಟೆಗಳ ಕಾಲ ಶೀತ ಅಲೆಯ ಪರಿಸ್ಥಿತಿಗಳು ಪ್ರತ್ಯೇಕ ಪಾಕೆಟ್‌ಗಳಲ್ಲಿ ಇರುತ್ತವೆ ಎಂದು ಐಎಂಡಿ ತಿಳಿಸಿದೆ.

Karnataka Weather Today: ಕರ್ನಾಟಕದಲ್ಲಿ ಮಳೆ ಇಳಿಮುಖ; ಈ ರಾಜ್ಯಗಳಲ್ಲಿ ಡಿ. 25ರವರೆಗೆ ಮಳೆ, ಹಿಮಪಾತ
ಮಳೆ
Edited By:

Updated on: Dec 21, 2021 | 6:10 AM

ಬೆಂಗಳೂರು: ಕಳೆದ ಮೇ ಅಂತ್ಯದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿರಲೇ ಇಲ್ಲ. ಈ ಬಾರಿಯ ಬಹುಪಾಲು ಚಳಿಗಾಲವನ್ನೂ ಮಳೆಗಾಲವೇ ಆವರಿಸಿಕೊಂಡಿತ್ತು. ವಾಯುವ್ಯ ಭಾರತದಲ್ಲಿ ಇಂದು ಶೀತದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂದಿನ 2 ದಿನಗಳ ಕಾಲ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಶೀತ ಅಲೆಯ ಪರಿಸ್ಥಿತಿಗಳು ಮುಂದುವರಿಯಲಿದೆ ಎನ್ನಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಕಳೆದ 2 ತಿಂಗಳಿನಿಂದ ಭಾರೀ ಮಳೆಯಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ನಂತರದ 24 ಗಂಟೆಗಳ ಕಾಲ ಶೀತ ಅಲೆಯ ಪರಿಸ್ಥಿತಿಗಳು ಪ್ರತ್ಯೇಕ ಪಾಕೆಟ್‌ಗಳಲ್ಲಿ ಇರುತ್ತವೆ ಎಂದು ಐಎಂಡಿ ತಿಳಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬುಧವಾರ ಮಧ್ಯಾಹ್ನದವರೆಗೆ ಮತ್ತು ಜಮ್ಮು, ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಇಂದು ಮಧ್ಯಾಹ್ನದವರೆಗೆ ಚಳಿಗಾಳಿ ಹೆಚ್ಚಾಗಿದೆ.

ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಗುರುವಾರ ಮಧ್ಯಾಹ್ನದವರೆಗೆ ಚಳಿ ಅಲೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 22ರಿಂದ 25ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಲಘುವಾಗಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ಡಿಸೆಂಬರ್ 23ರಿಂದ ಡಿಸೆಂಬರ್ 25ರವರೆಗೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮತ್ತು ಡಿಸೆಂಬರ್ 24 ಮತ್ತು 25ರಂದು ಪಶ್ಚಿಮ ರಾಜಸ್ಥಾನದ ಮೇಲೆ ದಟ್ಟವಾದ ಮಂಜು ಇರುತ್ತದೆ. ಭಾರತೀಯ ಹವಾಮಾನ ಇಲಾಖೆ (IMD) ಡಿ. 25ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 24ರಂದು ಪಂಜಾಬ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಡಿ. 24ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್ 22 ಮತ್ತು 23ರಂದು ಈ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು.

ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ವಿದರ್ಭ, ಬಿಹಾರ, ಜಾರ್ಖಂಡ್‌ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಮಳೆಗಾಲ ಮುಗಿದ ಲಕ್ಷಣ; ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಇಲ್ಲ ಬದಲಾವಣೆ

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಹೆಚ್ಚಾಯ್ತು ಚಳಿ ಗಾಳಿ