Karnataka Weather Today: ಹೊಸ ವರ್ಷದವರೆಗೂ ರಾಜ್ಯಾದ್ಯಂತ ಚಳಿ; ಉತ್ತರ ಭಾರತದಲ್ಲಿ ಮಳೆಯ ಅಬ್ಬರ
Weather Forecast Today: ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಡಿಸೆಂಬರ್ 30ರತನಕ ಚದುರಿದ ಮಳೆಯಾಗಲಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಚಳಿ ಉಂಟಾಗಲಿದೆ. ಇಂದು ಈ ರಾಜ್ಯಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗಲಿದೆ.
ನವದೆಹಲಿ: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಪೂರ್ವ ಭಾರತದಲ್ಲಿ ಡಿಸೆಂಬರ್ ತಿಂಗಳು ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಭಾಗಗಳಲ್ಲಿ ಈ ವಾರ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. ಜನವರಿ 2ರವರೆಗೂ ದೇಶದ ಹಲವು ರಾಜ್ಯಗಳಲ್ಲಿ ಚಳಿ ಮತ್ತು ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಪಶ್ಚಿಮ ಹಿಮಾಲಯ, ರಾಜಸ್ಥಾನದ ಪಶ್ಚಿಮ ಪ್ರದೇಶಗಳಲ್ಲಿ ಚಂಡಮಾರುತ ಉಂಟಾಗಲಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಡಿಸೆಂಬರ್ 30ರ ಮುಂಜಾನೆ ತನಕ ಚದುರಿದ ಮಳೆಯಾಗಲಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಚಳಿ ಉಂಟಾಗಲಿದೆ. ಇಂದು ಈ ರಾಜ್ಯಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗಲಿದೆ.
ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 31ರ ಹೊತ್ತಿಗೆ, ಮಳೆಯು ಸಂಪೂರ್ಣವಾಗಿ ನಿಲ್ಲುತ್ತದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇತರೆ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಬಿಹಾರದಾದ್ಯಂತ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಬಿಹಾರದ ನೈಋತ್ಯ ಮತ್ತು ದಕ್ಷಿಣ-ಮಧ್ಯ ಭಾಗಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಬಿಹಾರದಾದ್ಯಂತ ಕೆಲವು ಸ್ಥಳಗಳಲ್ಲಿ ಮಂಜು ಆವರಿಸುವ ನಿರೀಕ್ಷೆಯಿದೆ. ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಗುಡುಗು ಸಹಿತ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ಬುಲೆಟಿನ್ ಪ್ರಕಾರ, ಈಶಾನ್ಯ ರಾಜಸ್ಥಾನದಿಂದ ಪಶ್ಚಿಮ ಮಧ್ಯಪ್ರದೇಶದ ವಿದರ್ಭದ ನಡುವೆ ಹಗುರ ಮಳೆಯಾಗಲಿದೆ.
Madhya Pradesh | India Meteorological Department predicts ‘thunderstorm with rain’ in Bhopal today, minimum temperature to remain around 11 degrees Celcius pic.twitter.com/ASaOjiRPoA
— ANI (@ANI) December 28, 2021
ಹವಾಮಾನ ಸಂಸ್ಥೆ ಪ್ರಕಾರ, ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ರಾಜ್ಯಗಳಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ. IMD ಪ್ರಕಾರ, ಇಂದು ಮತ್ತು ಡಿಸೆಂಬರ್ 30ರಂದು ಬಿಹಾರದಲ್ಲಿ ಶೀತ ವಾತಾವರಣ ಇರಲಿದೆ.
ಮುಂದಿನ 2 ದಿನಗಳಲ್ಲಿ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನದಲ್ಲಿ ಮತ್ತು ಡಿಸೆಂಬರ್ 30 ಮತ್ತು 31ರಂದು ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದ ಭಾಗಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಮಧ್ಯ ಭಾರತದಲ್ಲಿ ಮತ್ತು ಡಿಸೆಂಬರ್ 30ರವರೆಗೆ ಪೂರ್ವ ಭಾರತದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಚದುರಿದ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.
ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಇಂದು ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಇಂದು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ: Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ
Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಚಳಿ; ಈ ರಾಜ್ಯಗಳಲ್ಲಿ ಇಂದು ಮಳೆ, ಹಿಮಪಾತ