Karnataka Weather Today: ಕರ್ನಾಟಕದಲ್ಲಿ ಅ. 6ರವರೆಗೂ ಮಳೆ; ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಹಳದಿ ಅಲರ್ಟ್ ಘೋಷಣೆ

Karnataka Rain: ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಅ. 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಅ. 6ರವರೆಗೂ ಮಳೆ; ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಹಳದಿ ಅಲರ್ಟ್ ಘೋಷಣೆ
ಹುಬ್ಬಳ್ಳಿಯಲ್ಲಿ ಮಳೆ
Edited By:

Updated on: Oct 03, 2021 | 6:38 AM

Karnataka Rain: ಕರ್ನಾಟಕದಲ್ಲಿ ಈ ವರ್ಷದ ಮಾನ್ಸೂನ್ ಮುಕ್ತಾಯವಾಗಿದ್ದರೂ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಮಲೆನಾಡು, ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಗುರವಾದ ಮಳೆಯಾಗಲಿದ್ದು, ಅ. 5ರಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಅ. 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 5 ಮತ್ತು 6ರಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಇಂದು ಮತ್ತು ನಾಳೆ ಕರ್ನಾಟಕದ ಹಲವು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿ ನಾಳೆಯಿಂದ ಮಳೆ ಕೊಂಚ ಹೆಚ್ಚಾಗಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 8ರಷ್ಟು ಕಡಿಮೆ ಮಳೆಯಾಗಿದೆ. ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಆ. 4, 5ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಇತ್ಯಾದಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಶಾಹೀನ್ ಚಂಡಮಾರುತದ ಪರಿಣಾಮದಿಂದ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಅ. 6ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಅ. 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ. ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ. ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಇಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ. ಕೇರಳ, ತಮಿಳುನಾಡಿನಲ್ಲಿ ಕೂಡ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಕರ್ನಾಟಕ ಮಾತ್ರವಲ್ಲದೆ ಬಿಹಾರ, ಅರುಣಾಚಲಪ್ರದೇಶ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಣಿಪುರ, ಮಿಜೋರಾಂ, ಲಕ್ಷದ್ವೀಪ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಕೇರಳ, ತಮಿಳುನಾಡು, ಗೋವಾ, ಉತ್ತರ ಪ್ರದೇಶ, ಅಂಡಮಾನ್ ನಿಕೋಬಾರ್, ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಛತ್ತೀಸ್​ಗಢ, ತೆಲಂಗಾಣ, ಆಂಧ್ರಪ್ರದೇಶ, ಸಿಕ್ಕಿಂ, ಲಡಾಖ್​ನಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಅ. 4ರವರೆಗೆ ವ್ಯಾಪಕ ಮಳೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Karnataka Rain: ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ; ಇಂದಿನಿಂದ 3 ದಿನ ಸಾಧಾರಣ ಮಳೆ

TV9 Web

TV9 Kannada

Read More
Loading...
Unable to load recommendations.
Follow Us