Bengaluru Rain: ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಒಣಹವೆ ಇರಲಿದೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ.
ಪೂರ್ವ ಮಾರುತಗಳು ಮತ್ತು ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಶುಷ್ಕ ವಾತಾವರಣವಿರಲಿದೆ. ಆದರೂ ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಒಣ ಹವೆ ಮುಂದುವರೆಯಲಿದೆ.
ಹವಾಮಾನ ಇಲಾಖೆಯು ತನ್ನ ಟ್ವೀಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಪಶ್ಚಿಮ, ಪೂರ್ವ ಪ್ರದೇಶದಲ್ಲಿ ಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಡಿಸೆಂಬರ್ 17ರಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಡಿಸೆಂಬರ್ 17ರ ಅವಧಿಯಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ಇದೆ.
•Light to moderate rainfall at isolated/scattered places very likely over Tamilnadu-Puducherry-Karaikal, Andaman & Nicobar Islands and isolated rainfall over Kerala-Mahe and during next 5 days.
•Dry weather very likely over remaining parts of the country during next 5 days.— India Meteorological Department (@Indiametdept) December 15, 2021
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ. IMD ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 6-10 ಡಿಗ್ರಿ ಸೆಲ್ಷಿಯಸ್ ಇರಲಿದೆ. ಇಂದಿನಿಂದ ಈಶಾನ್ಯ ತ್ರಿಪುರ, ವಾಯುವ್ಯ ಮಿಜೋರಾಂ, ದಕ್ಷಿಣ ಅಸ್ಸಾಂ ಮತ್ತು ಈಶಾನ್ಯ ಅರುಣಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.
ಡಿಸೆಂಬರ್ 19ರವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಡಿಸೆಂಬರ್ 17ರವರೆಗೆ ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಮತ್ತು ಡಿ. 17ರ ನಡುವೆ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಉತ್ತರ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ನೀಡಲಾಗಿದೆ.
ಡಿಸೆಂಬರ್ 19ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಮುಂದಿನ 3 ದಿನ ಮಳೆಯಾಗಲಿದೆ. ಇಂದು ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 17ರ ಮಧ್ಯಾಹ್ನದಿಂದ ಡಿಸೆಂಬರ್ 20ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶದಲ್ಲಿ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇಂದಿನಿಂದ 3 ದಿನಗಳವರೆಗೆ ಕಾಶ್ಮೀರ ಮತ್ತು ಲಡಾಖ್‌ನ ಪ್ರತ್ಯೇಕ ಭಾಗಗಳಲ್ಲಿ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 17ರವರೆಗೆ ದಕ್ಷಿಣ ಭಾರತ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಿಂಚಿನೊಂದಿಗೆ ಸೇರಿದ ಮಳೆಯಾಗಲಿದೆ.
ಇದನ್ನೂ ಓದಿ: Rain Updates: ಪಂಜಾಬ್, ಉತ್ತರ ಪ್ರದೇಶ ಸೇರಿ ಈ ರಾಜ್ಯಗಳಲ್ಲಿ ನಾಳೆಯಿಂದ ಭಾರೀ ಮಳೆ ಶುರು
Karnataka Weather Today: ಬೆಂಗಳೂರಿನಲ್ಲಿ ಇಂದೂ ಚಳಿ, ಮಳೆ; ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಹಗುರ ಮಳೆ