AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಮಳೆ ಮುನ್ಸೂಚನೆ ಸೆಪ್ಟೆಂಬರ್ 5: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದು, ಕೆಲವು ಜಿಲ್ಲೆಗಳಿಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಜಿಕೆವಿಕೆ, ಹೊಸಕೋಟೆ ಸೇರಿ ಕೆಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on:Sep 05, 2026 | 6:36 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ
  • ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಮಳೆ ಸಾಧ್ಯತೆ
  • ಬೆಂಗಳೂರಿನ ಜಿಕೆವಿಕೆಯಲ್ಲಿ 3 ಸೆಂಮೀ ಮಳೆ

ಬೆಂಗಳೂರು, ಸೆಪ್ಟೆಂಬರ್ 5: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 5 ಮತ್ತು 6ರಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಒಳನಾಡಿಗಿಂತ ಹೆಚ್ಚು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಉತ್ತರ ಒಳನಾಡಿಗೂ ಮಳೆ, ಗಾಳಿ ಅಲರ್ಟ್

ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯೊಂದಿಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 6ರಂದು ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

LIVE TV

ಸೆಪ್ಟೆಂಬರ್ 6ರಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಶುಕ್ರವಾರ ಸಂಜೆಗೆ ಕೊನೆಗೊಂಡಂತೆ 24 ಗಂಟ ಅವಧಿಯಲ್ಲಿ ಬೆಂಗಳೂರಿನ ಜಿಕೆವಿಕೆ ಕೇಂದ್ರದಲ್ಲಿ 3 ಸೆಂ.ಮೀ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 3 ಸೆಂ.ಮೀ. ಹಾಗೂ ಬೆಂಗಳೂರು ನಗರದಲ್ಲಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ 2 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಕೆಲವೆಡೆ ಹಗುರ ಮಳೆ ದಾಖಲಾಗಿದೆ. ಮುಂದಿನ ಒಂದು ವಾರ ಮಳೆ ದುರ್ಬಲವಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದಾಗ್ಯೂ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಸೆಪ್ಟೆಂಬರ್ 5 ಮತ್ತು 6ರಂದು ಗುಡುಗು-ಮಿಂಚು ಹಾಗೂ ಬಲವಾದ ಗಾಳಿಗೆ ಸಂಬಂಧಿಸಿದ ಎಚ್ಚರಿಕೆಯೂ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 am, Sat, 5 September 26

Follow Us
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು