
ಬೆಂಗಳೂರು, ಸೆಪ್ಟೆಂಬರ್ 5: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 5 ಮತ್ತು 6ರಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಒಳನಾಡಿಗಿಂತ ಹೆಚ್ಚು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯೊಂದಿಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 6ರಂದು ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆಯಿದೆ.
ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 6ರಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಶುಕ್ರವಾರ ಸಂಜೆಗೆ ಕೊನೆಗೊಂಡಂತೆ 24 ಗಂಟ ಅವಧಿಯಲ್ಲಿ ಬೆಂಗಳೂರಿನ ಜಿಕೆವಿಕೆ ಕೇಂದ್ರದಲ್ಲಿ 3 ಸೆಂ.ಮೀ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 3 ಸೆಂ.ಮೀ. ಹಾಗೂ ಬೆಂಗಳೂರು ನಗರದಲ್ಲಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ 2 ಸೆಂ.ಮೀ. ಮಳೆಯಾಗಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಕೆಲವೆಡೆ ಹಗುರ ಮಳೆ ದಾಖಲಾಗಿದೆ. ಮುಂದಿನ ಒಂದು ವಾರ ಮಳೆ ದುರ್ಬಲವಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದಾಗ್ಯೂ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಸೆಪ್ಟೆಂಬರ್ 5 ಮತ್ತು 6ರಂದು ಗುಡುಗು-ಮಿಂಚು ಹಾಗೂ ಬಲವಾದ ಗಾಳಿಗೆ ಸಂಬಂಧಿಸಿದ ಎಚ್ಚರಿಕೆಯೂ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:32 am, Sat, 5 September 26