Karnataka Weather Today: ಕರ್ನಾಟಕದಲ್ಲಿ ಮಳೆ ಇಳಿಕೆ; ಅಸ್ಸಾಂ, ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ

Karnataka Rain: ತಮಿಳುನಾಡು ಮತ್ತು ಕೇರಳದಲ್ಲಿ ಫೆಬ್ರವರಿ ಇಂದು ಲಘು ಮಳೆಯಾಗಲಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದ ಮಳೆ ಅಥವಾ ಗುಡುಗು ಸಹಿತ ಹಿಮ ಬೀಳುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

Karnataka Weather Today: ಕರ್ನಾಟಕದಲ್ಲಿ ಮಳೆ ಇಳಿಕೆ; ಅಸ್ಸಾಂ, ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ
ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)
Follow us
| Updated By: ಸುಷ್ಮಾ ಚಕ್ರೆ

Updated on: Feb 01, 2022 | 6:09 AM

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ನಾಲ್ಕೈದು ದಿನಗಳ ಕಾಲ ಮಳೆಯಾಗಿತ್ತು. ಇದೀಗ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದ್ದು, ನೆರೆಯ ರಾಜ್ಯಗಳಲ್ಲಿ ಮಾತ್ರ ಮಳೆ (Rain) ಮುಂದುವರೆದಿದೆ. ಫೆಬ್ರವರಿ 2 ಮತ್ತು 4ರ ನಡುವೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಇಂದು ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಫೆಬ್ರವರಿ ಇಂದು ಲಘು ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಅರುಣಾಚಲ ಪ್ರದೇಶದಲ್ಲಿ ಇಂದು ವ್ಯಾಪಕ ಮಳೆ ಅಥವಾ ಗುಡುಗು ಸಹಿತ ಹಿಮ ಬೀಳುವ ಸಾಧ್ಯತೆ ಇದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದ ಮಳೆ ಅಥವಾ ಗುಡುಗು ಸಹಿತ ಹಿಮ ಬೀಳುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮದ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ, ಮಾಹೆಯಲ್ಲಿ ಗುಡುಗು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತರ, ಮಧ್ಯ ಮತ್ತು ಪೂರ್ವ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಲಿದೆ. ಫೆಬ್ರವರಿ 5ರವರೆಗೆ ಶೀತ ಗಾಳಿ ಬೀಸಲಿದ್ದು, ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ (ಮಹಾರಾಷ್ಟ್ರದಲ್ಲಿ) ಮತ್ತು ಛತ್ತೀಸ್‌ಗಢದಲ್ಲಿ ಚಳಿ ಉಂಟಾಗಲಿದೆ. ಫೆಬ್ರವರಿ 2 ಮತ್ತು 4ರ ನಡುವೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಸಾಧಾರಣ ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ. ಫೆಬ್ರವರಿ 3ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಬೀಳುವ ಸಾಧ್ಯತೆಯಿದೆ.

ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮ ಉಂಟಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಫೆ. 3 ಮತ್ತು 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.

ಅರಬ್ಬಿ ಸಮುದ್ರದಿಂದ ತೇವಾಂಶವನ್ನು ಒದಗಿಸುವ ನೈಋತ್ಯ ಮಾರುತಗಳು ಉಂಟಾಗಲಿದೆ. ಬಂಗಾಳಕೊಲ್ಲಿಯಿಂದ ಕಡಿಮೆ ಮಟ್ಟದ ಆಗ್ನೇಯ ಮಾರುತಗಳೊಂದಿಗೆ ಸಂವಹನ ನಡೆಸುತ್ತದೆ. ಆದ್ದರಿಂದ ಮಳೆ ಅಥವಾ ಹಿಮ ಉಂಟಾಗಲಿದೆ. ಇಂದು ಮಹಾರಾಷ್ಟ್ರದಲ್ಲಿ ಶೀತ ಅಲೆಯ ಸ್ಥಿತಿ ಉಂಟಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇಂದು ತುಂತುರು ಮಳೆ; ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ

Karnataka Dam Water Level: ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ