Karnataka Weather Today: ಕರ್ನಾಟಕ, ಕೇರಳ, ದೆಹಲಿಯಲ್ಲಿ ಇಂದು ಕೂಡ ಮಳೆಯ ಆರ್ಭಟ

Karnataka Rain: ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಕೂಡ ಮಳೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ.

Karnataka Weather Today: ಕರ್ನಾಟಕ, ಕೇರಳ, ದೆಹಲಿಯಲ್ಲಿ ಇಂದು ಕೂಡ ಮಳೆಯ ಆರ್ಭಟ
ಮಳೆ

Karnataka Rains: ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುತ್ತಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಕೂಡ ಮಳೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ.

ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನಲ್ಲಿ ಇಂದು ಕೂಡ ಮಳೆಯಾಗಲಿದೆ. ರಾಜ್ಯದಲ್ಲಿ ನಾಳೆಯಿಂದ ಮಳೆಯ ಆರ್ಭಟ ಕಡಿಮೆಯಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರಾಖಂಡ, ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಹರಿಯಾಣ, ಚಂಡೀಗಢ, ತ್ರಿಪುರ, ಜಾರ್ಖಂಡ್, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್‌, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢ, ಒಡಿಶಾ, ಸಿಕ್ಕಿಂನಲ್ಲಿ ಇಂದು ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಕೇರಳ, ದೆಹಲಿಯಲ್ಲಿ ಭಾರೀ ಮಲೆಯಾಗುತ್ತಿರುವುದರಿಂದ ಹಲವೆಡೆ ಭೂಕುಸಿತ ಉಂಟಾಗಿದೆ. ಉತ್ತರಾಖಂಡ, ಕೇರಳದಲ್ಲಿ ಮಳೆಯ ಪರಿಣಾಮದಿಂದ ಕೆಲವರು ಸಾವನ್ನಪ್ಪಿದ್ದಾರೆ.

ಒರಿಸ್ಸಾ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಅಂಡಮಾನ್ ನಿಕೋಬಾರ್, ಜಾರ್ಖಂಡ್, ಲಕ್ಷದ್ವೀಪ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಬಿಹಾರ, ಹರಿಯಾಣ, ದೆಹಲಿ, ರಾಜಸ್ಥಾನ, ತೆಲಂಗಾಣ, ಗುಜರಾತ್​​ನಲ್ಲಿ ಇಂದು ಮಳೆಯಾಗಲಿದೆ. ರಾಜಸ್ಥಾನ, ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಇಂದು ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Kerala Rain ಪ್ರವಾಹದಿಂದ ತತ್ತರಿಸಿದ ಕೇರಳದಲ್ಲಿ ಮತ್ತೆ ಮಳೆ ಸಾಧ್ಯತೆ; 35 ಮಂದಿ ಸಾವು

Karnataka Weather Today: ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್

Click on your DTH Provider to Add TV9 Kannada