AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

Karnataka Weather Today : ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗಲಿದೆ.

Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ
ಹುಬ್ಬಳ್ಳಿಯಲ್ಲಿ ಮಳೆ
TV9 Web
| Edited By: ಆಯೇಷಾ ಬಾನು|

Updated on:Oct 06, 2021 | 6:48 AM

Share

Bangalore Rain: ಸೆಪ್ಟೆಂಬರ್​ಗೆ ಮುಂಗಾರು (Monsoon 2021) ಅಧಿಕೃತವಾಗಿ ಅಂತ್ಯವಾಗಿದ್ದರೂ ರಾಜ್ಯದಲ್ಲಿ ಮಳೆ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಕರ್ನಾಟಕದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಈ ಮೊದಲೇ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿತ್ತು. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಮಳೆ ಹೆಚ್ಚಾಗುವುದರಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್  (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಅ. 7ರವರೆಗೆ ಮಳೆ ಜಾಸ್ತಿಯಾಗಲಿದೆ. ಬೆಂಗಳೂರಿನಲ್ಲಿ 2 ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ಸಿಲಿಕಾನ್ ಸಿಟಿಯ ರಾಜಕಾಲುವೆ ಉಕ್ಕಿ ಹರಿದಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹೆಚ್‌ಎಎಲ್ ಬಳಿಯ ರಮೇಶ್ ನಗರದಲ್ಲಿ ಗೋಡೆ ಕುಸಿತವಾಗಿದೆ. ಹೆಚ್‌ಎಎಲ್‌ಗೆ ಸೇರಿದ 12 ಅಡಿ ಎತ್ತರದ ಗೋಡೆ ಕುಸಿತವಾಗಿದೆ.

ಉತ್ತರ ಕರ್ನಾಟಕದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಉಳಿದಂತೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತ್ರಿಪುರ, ಮಣಿಪುರ, ಮಿಜೋರಾಂ, ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಆಂಧ್ರಪ್ರದೇಶದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Bangalore Rain: ಧರೆಗುರುಳಿದ್ದ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತ, ರಾಜಕಾಲುವೆ ನೀರು ನುಗ್ಗಿ 10 ಕ್ಕೂ ಹೆಚ್ಚು ಜಾನುವಾರು ಸಾವು

Published On - 8:41 pm, Tue, 5 October 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ