Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ

Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ
ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)

Karnataka Rain: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

TV9kannada Web Team

| Edited By: Sushma Chakre

Jan 27, 2022 | 6:02 AM

ಬೆಂಗಳೂರು: ಕರ್ನಾಟಕದಲ್ಲಿ ಕಳೆದೊಂದು ತಿಂಗಳಿನಿಂದ ಮಳೆ (Rain) ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಶುರುವಾಗಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ದಕ್ಷಿಣ ಭಾಗದಿಂದ ಆಂಧ್ರ ಪ್ರದೇಶದ ರಾಯಲಸೀಮೆಯವರೆಗೆ ಸುಳಿಗಾಳಿ ಉಂಟಾಗುವ ನಿರೀಕ್ಷೆಯಿದೆ. ಹೀಗಾಗಿ, ಕರ್ನಾಟಕದ (Karnataka Rain) ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಇನ್ನೆರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಇನ್ನೆರಡು ದಿನ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ರಾತ್ರಿ ಉತ್ತರ ಭಾರತವನ್ನು ಅತ್ಯಂತ ದಟ್ಟವಾದ ಮಂಜು ಆವರಿಸುವ ನಿರೀಕ್ಷೆಯಿದೆ. ಹಾಗೇ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ತೀವ್ರ ಚಳಿ ಉಂಟಾಗಲಿದೆ.

ಇದನ್ನೂ ಓದಿ: Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Weather Today: ದೆಹಲಿ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

Follow us on

Related Stories

Most Read Stories

Click on your DTH Provider to Add TV9 Kannada