AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕರಾವಳಿಯಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ

ಕರ್ನಾಟಕ ಹವಾಮಾನ ಮುನ್ಸೂಚನೆ ನವೆಂಬರ್ 6: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕರಾವಳಿಯಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
ಮಳೆ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Nov 06, 2026 | 6:27 AM

Share

ಮುಖ್ಯಾಂಶಗಳು

  • ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
  • ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಕೆ
  • ಬೆಂಗಳೂರು, ರಾಮನಗರ, ಹೊಸಕೋಟೆಯಲ್ಲಿ 3 ಸೆಂ.ಮೀ. ಮಳೆ

ಬೆಂಗಳೂರು, ನವೆಂಬರ್ 6: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.6) ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಕರಾವಳಿ ಕರ್ನಾಟಕದ ಕೆಲವೆಡೆ ಗುಡುಗು-ಮಿಂಚಿನ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಕರಾವಳಿಯ ಎರಡು ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಇಂದು ಕರಾವಳಿ ಕರ್ನಾಟಕದ ಕೆಲವೆಡೆ ಗುಡುಗು-ಮಿಂಚಿನ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವೆಡೆ ನವೆಂಬರ್ 7ರವರೆಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಒಣಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಎಷ್ಟು ಮಳೆ?

ಗುರುವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮುಖ್ಯವಾಗಿ ಒಣಹವೆ ಕಂಡುಬಂದಿದೆ. ರಾಮನಗರ, ಬೆಂಗಳೂರು ನಗರದ ಎಚ್‌ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಂ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಚಿಕ್ಕಮಗಳೂರು ಜಿಲ್ಲೆಯ ಕಳಸ ಹಾಗೂ ಬೆಂಗಳೂರು ನಗರ ವೀಕ್ಷಣಾಲಯದಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಸೈಕ್ಲೋನ್, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನಿಖರ ಮುನ್ಸೂಚನೆ ಹೇಗೆ ಸಾಧ್ಯ?: ಐಎಂಡಿ ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಇನ್ನು ರಾಜ್ಯದ ಬಯಲು ಪ್ರದೇಶಗಳಲ್ಲಿ ಧಾರವಾಡದಲ್ಲಿ ಕನಿಷ್ಠ 17.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್