Karnataka Weather Today: ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ; ಒಡಿಶಾ, ಬಂಗಾಳದಲ್ಲಿ ಆರೆಂಜ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Jan 11, 2022 | 6:03 AM

Karnataka Rain: ಮಳೆಯಿಂದ ಇಂದು ಅಸ್ಸಾಂ ಮತ್ತು ಮೇಘಾಲಯಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

Karnataka Weather Today: ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ; ಒಡಿಶಾ, ಬಂಗಾಳದಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ಮಳೆ
Follow us on

Bengaluru Rain: ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 20 ದಿನಗಳಿಂದ ಮಳೆ ಕಡಿಮೆಯಾಗಿ ಚಳಿ ಹೆಚ್ಚಾಗಿತ್ತು. ಆದರೆ, ಇಂದಿನಿಂದ ಮತ್ತೆ ತುಂತುರು ಮಳೆ ಶುರುವಾಗಿದ್ದು, ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ರಾಜ್ಯದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಜನವರಿ 13 ಮತ್ತು 14ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮಾತ್ರವಲ್ಲದೆ ಆಂಧ್ರಪ್ರದೇಶ, ತಮಿಳುನಾಡು, ಅಸ್ಸಾಂ, ಮಧ್ಯಪ್ರದೇಶ ಮುಂತಾದೆಡೆ ಮಳೆ ಹೆಚ್ಚಾಗಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಸೇರಿದಂತೆ ಮಧ್ಯ ಭಾರತದಲ್ಲಿ ಬಂಗಾಳಕೊಲ್ಲಿಯಿಂದ ದಕ್ಷಿಣ ದಿಕ್ಕಿನ ಮಾರುತಗಳೊಂದಿಗೆ ಅರಬ್ಬಿ ಸಮುದ್ರದಿಂದ ತೇವಾಂಶದಿಂದ ಕೂಡಿದ ಗಾಳಿ ಬೀಸಲಿದೆ. ಇಂದಿನಿಂದ ಶುಕ್ರವಾರದವರೆಗೆ ಪೂರ್ವ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಅಧಿಕವಾಗಲಿದೆ.

ಹಾಗೇ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬುಧವಾರ ಮತ್ತು ಗುರುವಾರ (ಜನವರಿ 12-13) ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಮಳೆಯ ಜೊತೆಗೆ ಈ ವಾರ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹ ಉಂಟಾಗುವ ಸಾಧ್ಯತೆಯಿದೆ. ಇಂದು (ಮಂಗಳವಾರ) ಅಸ್ಸಾಂ ಮತ್ತು ಮೇಘಾಲಯಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ನಾಳೆ (ಬುಧವಾರ) ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆ ಹೆಚ್ಚಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದು (ಜನವರಿ 11) ಮತ್ತು 12ರಂದು ಒಡಿಶಾ ರಾಜ್ಯಕ್ಕೆ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಇಂದು ಈ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇಂದಿನಿಂದ ಜನವರಿ 13ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ದೆಹಲಿ ನಗರದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದ್ದು, ಇಂದು ಮತ್ತು ಜನವರಿ 17ರ ನಡುವೆ ಯಾವುದೇ ತೊಂದರೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೂಡ ಮಳೆಯಾಗಲಿದೆ. ಒಡಿಶಾದಲ್ಲಿ ಇಂದು ಮತ್ತು ಜನವರಿ 12 ರಂದು ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇದನ್ನೂ ಓದಿ: Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Weather Today: ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ; ದೆಹಲಿ, ಚೆನ್ನೈನಲ್ಲಿ ಭಾರೀ ಮಳೆ