Karnataka Weather Today: ಬೆಂಗಳೂರು, ಕೊಡಗು, ಮಲೆನಾಡಿನಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ

Karnataka Rain: ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ.

Karnataka Weather Today: ಬೆಂಗಳೂರು, ಕೊಡಗು, ಮಲೆನಾಡಿನಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 29, 2022 | 5:55 AM

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮೂರು ದಿನ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇಂದು ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ (Moderate Rainfall) ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇಂದಿನಿಂದ ಮೇ 1ರವರರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರ ನಡುವೆ ಕರ್ನಾಟಕದಲ್ಲಿ ಮಳೆಯಿಂದ ಕೆಲವು ಅವಾಂತರಗಳು ಕೂಡ ಉಂಟಾಗಿವೆ. ಸಿಡಿಲು ಬಡಿದು ಓರ್ವ ವ್ಯಕ್ತಿ ಹಾಗೂ ಮೇಕೆಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ನಡೆದಿದೆ. ರಾಮಣ್ಣ ಪೂಜಾರಿ(48) ಮೃತ ವ್ಯಕ್ತಿ. ಶಿವಮೊಗ್ಗದಲ್ಲಿ ಗಾಳಿ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ಮರಗಳು ಧರೆಗುರುಳಿರುವಂತಹ ಘಟನೆ ದುರ್ಗಿಗುಡಿ ಬಡಾವಣೆ ಮತ್ತು ತಿಲಕ ನಗರದ ಮಲ್ನಾಡ್ ಸ್ಕ್ಯಾನ್ ಸೆಂಟರ್ ಬಳಿ ನಡೆದಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

ಮೇ 1ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಂದಿನಿಂದ ಈಶಾನ್ಯ ಭಾರತದಲ್ಲಿ ಮಿಂಚು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಇಂದು ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಮಿಂಚು ಮತ್ತು ಬಿರುಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮೇ 4 ಮತ್ತು 7ರ ವೇಳೆಗೆ ಉಷ್ಣ ಅಲೆ ಉಂಟಾಗಲಿದೆ. ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಬಿರುಗಾಳಿ, ಗುಡುಗು ಮತ್ತು ಮಳೆಯ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳ, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಮುಂದಿನ 4 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಗುಡುಗು, ಭಾರೀ ಮಳೆ

Karnataka Rain: ಮೇ 1ರವರೆಗೆ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಆತಂಕ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ