Karnataka Weather Today: ಕರ್ನಾಟಕದಲ್ಲಿ ನಿಂತಿಲ್ಲ ವರುಣನ ಆರ್ಭಟ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

| Updated By: ಆಯೇಷಾ ಬಾನು

Updated on: Oct 29, 2021 | 6:45 AM

Karnataka Rain: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಲ್ಲಿ ನಿಂತಿಲ್ಲ ವರುಣನ ಆರ್ಭಟ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
ಮಳೆ
Follow us on

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ. ಅಕ್ಟೋಬರ್ 30ರಂದು ಕರ್ನಾಟಕಕ್ಕೆ ಹಿಂಗಾರು ಮಾರುತಗಳು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನ. 1ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ 14 ಜಿಲ್ಲೆಗಳಲ್ಲಿ ಅ. 30 ಮತ್ತು 31ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ. 30 ಮತ್ತು 31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ ನ. 1ರವರೆಗೆ ಮಳೆ ಹೆಚ್ಚಾಗಲಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇದೇ 30ರಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಇಂದಿನಿಂದ ನವೆಂಬರ್ 1ರವರರೆಗೂ ಭಾರೀ ಮಳೆಯಾಗಲಿದೆ.

ತಮಿಳುನಾಡಿನ ಕೆಲವು ಸ್ಥಳಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರವರೆಗೆ ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕ ಮಳೆಯಾಗುತ್ತದೆ. ನಾಳೆಯಿಂದ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 30ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆ ಹೆಚ್ಚಾಗಲಿದೆ. ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಾಲ್ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಹಾಗೂ ರಾಯಲಸೀಮೆಯಲ್ಲಿ ಇಂದಿನಿಂದ ನವೆಂಬರ್ 1ರವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 4 ದಿನಗಳವರೆಗೆ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್ 1ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ರಾಯಲಸೀಮೆಯಲ್ಲಿ ಇಂದಿನಿಂದ ನವೆಂಬರ್ 1ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಹೀಗಿದ್ದರೂ ಮುಂದಿನ 4 ದಿನಗಳವರೆಗೆ ವಾಯುವ್ಯ, ಪಶ್ಚಿಮ, ಮಧ್ಯ ಮತ್ತು ಪೂರ್ವ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಮುಖ್ಯವಾಗಿ ಒಣ ಹವಾಮಾನವು ಮುಂದುವರೆಯುವ ಸಾಧ್ಯತೆಯಿದೆ. ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲುಪುರಂ, ಕಡಲೂರು, ನಾಗಪಟ್ಟಣಂ, ಮೈಲಾಡುತುರೈ, ತಿರುವರೂರು ಮತ್ತು ತಮಿಳುನಾಡಿನ ತಂಜಾವೂರು ಜಿಲ್ಲೆ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಪಶ್ಚಿಮಕ್ಕೆ ಚಲಿಸುವ ಚಂಡಮಾರುತದ ಪರಿಚಲನೆಯೊಂದಿಗೆ ಈ ವಾರಾಂತ್ಯದವರೆಗೆ ಮಳೆಯಾಗಲಿದೆ.

ಇದನ್ನೂ ಓದಿ: Weather Today: ನ.1ರವರೆಗೆ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡಿನಲ್ಲಿ ಭಾರೀ ಮಳೆ; ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 76ಕ್ಕೆ ಏರಿಕೆ; 14 ಜನ ಇನ್ನೂ ನಾಪತ್ತೆ