Karnataka Weather Today: ಬೆಂಗಳೂರು, ಶಿವಮೊಗ್ಗ, ಕೊಡಗು, ಕರಾವಳಿಯಲ್ಲಿ ಅ. 3ರವರೆಗೂ ಭಾರೀ ಮಳೆ
Karnataka Rain | ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
Karnataka Rain: ಗುಲಾಬ್ ಚಂಡಮಾರುತದ (Cyclone Gulab) ಪರಿಣಾಮದಿಂದ ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನಾಳೆಯಿಂದ ಶಾಹೀನ್ ಚಂಡಮಾರುತವೂ (Shaheen Cyclone) ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ ಅ. 3ರವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟವಿರಲಿದೆ.
ಇಂದಿನಿಂದ 4 ದಿನಗಳ ಕಾಲ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದು ಸೌರಾಷ್ಟ್ರ, ಕಚ್, ಪಶ್ಚಿಮ ಬಂಗಾಳ, ಗುಜರಾತ್, ಜಾರ್ಖಂಡ್, ಒರಿಸ್ಸಾ, ತಮಿಳುನಾಡು, ಉತ್ತರಾಖಂಡ, ಪುದುಚೆರಿ, ಲಕ್ಷದ್ವೀಪದಲ್ಲಿ ವಿಪರೀತ ಮಳೆಯಾಗಲಿದೆ. ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒರಿಸ್ಸಾ, ಬಿಹಾರ್, ಕೊಂಕಣ, ಕೇರಳ, ತೆಲಂಗಾಣ, ಛತ್ತೀಸ್ಗಢ, ವಿದರ್ಭ, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಗೋವಾ, ಮಾಹೆ, ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ.
ಗುಲಾಬ್ ಚಂಡಮಾರುತ ಅಟ್ಟಹಾಸದಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ 13 ಜನರು ಬುಧವಾರ ಸಾವನ್ನಪ್ಪಿದ್ದಾರೆ. ಗುಲಾಬ್ ಚಂಡಮಾರುತದಿಂದ ಇದುವರೆಗೂ 25 ಜನ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾಗಿದ್ದು, ಇಂದು ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 1ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದ್ದು, ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ.
ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಅ. 1ರಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ. ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಗುಜರಾತ್ನಲ್ಲಿ ಈಗಾಗಲೇ ಗಾಳಿ, ಮಳೆ ಹೆಚ್ಚಾಗಿದೆ. ಇಂದಿನಿಂದ ಅ. 2ರವರೆಗೂ ಶಾಹೀನ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ.
ಇದನ್ನೂ ಓದಿ: Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್
Karnataka Weather Today: ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
(Karnataka weather Today Rainfall Hits Karnataka till October 3 due to Cyclone Shaheen Effect Karnataka Rain)