AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಭಾರೀ ಮಳೆಗೆ ಮಲೆನಾಡು, ಕರಾವಳಿ ತತ್ತರ; ಇನ್ನೆರಡು ದಿನ ರಾಜ್ಯಾದ್ಯಂತ ವರುಣನ ಅಬ್ಬರ

Karnataka Weather Today | ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Karnataka Rain: ಭಾರೀ ಮಳೆಗೆ ಮಲೆನಾಡು, ಕರಾವಳಿ ತತ್ತರ; ಇನ್ನೆರಡು ದಿನ ರಾಜ್ಯಾದ್ಯಂತ ವರುಣನ ಅಬ್ಬರ
ಮಳೆ
TV9 Web
| Edited By: |

Updated on:Sep 14, 2021 | 9:14 AM

Share

Karnataka Rains: ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್ (Yellow Alert) ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ವರುಣನ ಆರ್ಭಟ (Heavy Rain) ಹೆಚ್ಚಾಗಿದೆ. ಇಂದು ಹಾಗೂ ನಾಳೆ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಮತ್ತು ನೈಋತ್ಯ ಭಾಗಗಳಲ್ಲಿ ಸೆ. 17ರವರೆಗೂ ಮಳೆ ಮುಂದುವರೆಯಲಿದೆ.

ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಅಬ್ಬರ ಮಿತಿ ಮೀರಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.

ಹಾಗೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಸೆ. 15ರವರೆಗೆ ಮಳೆಯ ಆರ್ಭಟ ಇರಲಿದೆ.

ನಿನ್ನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 43.20 ಮಿ.ಮೀ, ಸಾಗರದಲ್ಲಿ 30 ಮಿ.ಮೀ, ಸೊರಬದಲ್ಲಿ 21.40 ಮಿ.ಮೀ ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅತ್ಯಧಿಕ 178.60 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿರುವುದರಿಂದ ಲಿಂಗನಮಕ್ಕಿ, ವರಾಹಿ, ತುಂಗಭದ್ರಾ, ಚಕ್ರಾ, ಸಾವೆಹಕ್ಲು ಡ್ಯಾಂಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಭೀಮಾ ನದಿಯಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಭೀಮಾ‌ ನದಿ ತೀರಕ್ಕೆ ಯಾರೂ ತೆರಳದಂತೆ ಹಾಗೂ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಜನತೆಗೆ ಡಿಸಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಒರಿಸ್ಸಾ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳಲ್ಲಿ ಸೆ. 16ರವರೆಗೆ ಮಳೆಯ ಅಬ್ಬರವಿರಲಿದೆ.

ಸಿಕ್ಕಿಂ, ಕೊಂಕಣ, ಮಿಜೋರಾಂ, ಲಕ್ಷದ್ವೀಪ, ಅಸ್ಸಾಂ, ದೆಹಲಿ, ನಾಗಾಲ್ಯಾಂಡ್, ಮಣಿಪುರ, ತೆಲಂಗಾಣ, ಕಚ್, ವಿದರ್ಭ, ಪುದುಚೆರಿ, ಮಾಹೆ, ಕರ್ನಾಟಕದ ಕರಾವಳಿ ಜಿಲ್ಲೆಗಳು, ತ್ರಿಪುರ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮರಾಠವಾಡ, ಹಿಮಾಚಲಪ್ರದೇಶ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಲಡಾಖ್, ತಮಿಳುನಾಡಿನಲ್ಲಿ ಇಂದು ವಿಪರೀತ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನು 3 ದಿನ ವ್ಯಾಪಕ ಮಳೆ; ಶಿವಮೊಗ್ಗ, ಕೊಡಗು, ಕರಾವಳಿ ಸೇರಿ ಹಲವೆಡೆ ಹೈ ಅಲರ್ಟ್

Delhi Rain: ದೆಹಲಿಯಲ್ಲಿ ವಿಪರೀತ ಮಳೆಗೆ ಜನ ತತ್ತರ; ಚರಂಡಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು

(Karnataka Weather Today Rainfall Hits Shimoga, Chikmagalur, Kodagu, Mangalore Karnataka Rain Bangalore Rain)

Published On - 6:37 am, Tue, 14 September 21

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ