Karnataka Weather Today: ಬೆಂಗಳೂರು ಸೇರಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆ

Bengaluru Rain: ಇಂದಿನಿಂದ 3 ದಿನ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.

Karnataka Weather Today: ಬೆಂಗಳೂರು ಸೇರಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆ
ಬೆಂಗಳೂರಿನಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 26, 2022 | 6:19 AM

Bangalore Rains: ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದಿಂದ (Cyclone Mandous) ಕರ್ನಾಟಕದಾದ್ಯಂತ ಮಳೆಯ ಅಬ್ಬರ ಉಂಟಾಗಿತ್ತು. ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ (Rainfall) ಇದೀಗ ಮತ್ತೆ ಅಬ್ಬರಿಸತೊಡಗಿದ್ದಾನೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ (Karnataka Rain) ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.

ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ ಸಂಜೆಯ ವೇಳೆಗೆ ತುಂತುರು ಮಳೆಯೂ ಸುರಿದಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Tamil Nadu Weather: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಇಂದು ಗುಡುಗು ಸಹಿತ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಡಿ. 27 ಮತ್ತು 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಖಿನ್ನತೆಗೆ ತಿರುಗಿದ ನಂತರ ತಮಿಳುನಾಡಿನ ಅನೇಕ ಸ್ಥಳಗಳು, ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಇಂದು ಮಳೆಯಾಗುತ್ತದೆ ಎಂದು ಈ ಹಿಂದೆ IMD ಹೇಳಿತ್ತು. ಹೀಗಾಗಿ, ಇಂದು ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯೊಂದಿಗೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಡಿ. 26) ಕೇರಳದಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ

ತಮಿಳುನಾಡು ಕರಾವಳಿ ಜಿಲ್ಲೆಗಳು, ಪುದುವೈ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಹಲವೆಡೆ ಮತ್ತು ತಮಿಳುನಾಡು ಒಳನಾಡಿನ  ಕೆಲವು ಸ್ಥಳಗಳಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು. ತೂತುಕುಡಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಮನಾಥಪುರಂ, ಶಿವಗಂಗೈ, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್