Karnataka Rain Today: ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
Bengaluru Rain | ಇಂದು ಸಂಜೆಯ ಬಳಿಕ ಬೆಂಗಳೂರಿನಲ್ಲಿ ಮಳೆ ಸುರಿಯಲಿದೆ. ಇಂದು ಸಂಜೆ 4 ಗಂಟೆಯ ನಂತರ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.
Karnataka Rain | ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದಿನಿಂದ 4 ದಿನಗಳ ಕಾಲ (Heavy Rain) ಭಾರೀ ಮಳೆಯಾಗಲಿದೆ. ನಿನ್ನೆ ಸಂಜೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನ (Bangalore Rain) ಬಹುತೇಕ ಭಾಗಗಳಲ್ಲಿ ಮಳೆ ಅಬ್ಬರಿಸಿದ್ದು, ಇಂದು ಕೂಡ ಸಂಜೆಯ ಬಳಿಕ ಸಿಲಿಕಾನ್ ಸಿಟಿಯಲ್ಲಿ (Bengaluru Rain) ಮಳೆ ಸುರಿಯಲಿದೆ. ಇಂದು ಸಂಜೆ 4 ಗಂಟೆಯ ನಂತರ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಇಂದು ರಾತ್ರಿಯವರೆಗೂ ಮಳೆ ಮುಂದುವರೆಯಲಿದೆ.
ನಿನ್ನೆ ರಾತ್ರಿ ಬೆಂಗಳೂರಿನ ಬಸವನಗುಡಿ, ಕತ್ರಿಗುಪ್ಪೆ, ಹನುಮಂತನಗರ, ಜಯನಗರ, ಬನಶಂಕರಿ, ಚಾಮರಾಜಪೇಟೆ, ವಿಜಯನಗರ, ಜೆಪಿ ನಗರ, ವೈಟ್ಫೀಲ್ಡ್, ಮಹದೇವಪುರ, ಕೋರಮಂಗಲ ಮುಂತಾದ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಇಂದಿನಿಂದ ಸೆ. 5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಸೆ. 3ರಿಂದ 5ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
1.9.2021 Forecast for Bengaluru: 48 hrs : Generally cloudy sky. Rain likely. Maximum and Minimum temperatures very likely to be around 30 and 20 degree Celsius respectively. #imdbangalore
— Met centre Bengaluru (@metcentre_bng) September 1, 2021
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಇಂದಿನಿಂದ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ.
ಇಂದು ಗುಜರಾತ್ ಮತ್ತು ದೆಹಲಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ಬಿಹಾರ, ಮಧ್ಯಪ್ರದೇಶ ಉತ್ತರಾಖಂಡ ರಾಜ್ಯಗಳಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಹಾಗೇ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಪುದುಚೆರಿ, ಛತ್ತೀಸ್ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ಮಾಹೆ ಭಾಗಗಳಲ್ಲಿ ಇಂದು ಮಳೆಯಾಗಲಿದೆ.
Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ
(Karnataka weather Today Rainfall in Bengaluru and other Districts till September 5 Karnataka Rain Bangalore Rains)