AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರಾವಳಿ, ಮಲೆನಾಡು ಸೇರಿ ಹಲವೆಡೆ ಸೆ. 6ರವರೆಗೂ ಗುಡುಗು ಸಹಿತ ಭಾರೀ ಮಳೆ

Karnataka Rain Today | ಇಂದಿನಿಂದ ಸೆ. 6ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆ. 5 ಮತ್ತು 6ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರಾವಳಿ, ಮಲೆನಾಡು ಸೇರಿ ಹಲವೆಡೆ ಸೆ. 6ರವರೆಗೂ ಗುಡುಗು ಸಹಿತ ಭಾರೀ ಮಳೆ
ಮಳೆ
TV9 Web
| Edited By: |

Updated on: Sep 03, 2021 | 6:22 AM

Share

Karnataka Rain | ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸುಮಾರು 20 ದಿನಗಳಿಂದ ಮಳೆಯಾಗುತ್ತಲೇ ಇದೆ. ಕಳೆದೊಂದು ವಾರದಿಂದ ಮಳೆಯ ಆರ್ಭಟ ಜಾಸ್ತಿಯಾಗಿದ್ದು, ಇಂದಿನಿಂದ ಎರಡು ದಿನ ಮತ್ತೆ ಮಳೆ ಮುಂದುವರೆಯಲಿದೆ. ಸೆ. 5 ಮತ್ತು 6ರಂದು ಕರ್ನಾಟಕದ (Rain in Karnataka) ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (IMD) ಹೈ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ (Bengaluru Rain) ಎರಡು ದಿನಗಳಿಂದ ಮತ್ತೆ ಮಳೆ ಶುರುವಾಗಿದೆ. ಇಂದು ಕೂಡ ಮಧ್ಯಾಹ್ನ 1 ಗಂಟೆಗೆ ಮಳೆಯಾಗಲಿದ್ದು, ರಾತ್ರಿ 8 ಗಂಟೆಯ ಬಳಿಕ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸೆ. 6ರಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಸೆ. 6ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇಂದು ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಕರ್ನಾಟಕ, ಬಿಹಾರ, ಮಧ್ಯಪ್ರದೇಶ, ದೆಹಲಿ, ಉತ್ತರಾಖಂಡ ರಾಜ್ಯಗಳಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಹಾಗೇ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಸೌರಾಷ್ಟ್ರ, ಮಾಹೆ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಪುದುಚೆರಿ, ಛತ್ತೀಸ್​ಗಢ, ಚಂಡೀಗಢ, ಹರಿಯಾಣ, ಪಂಜಾಬ್, ಲಕ್ಷದ್ವೀಪ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain Today: ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ

(Karnataka weather Today: Rainfall Lashes Coastal Karnataka, Malnad and Bangalore till September 6 Karnataka Rain)

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ