Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ; ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

| Updated By: preethi shettigar

Updated on: Nov 27, 2021 | 7:07 AM

Karnataka Rain: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ.

Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ; ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಮಳೆ
Follow us on

ಬೆಂಗಳೂರು: ಕರ್ನಾಟಕದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ (Heavy Rain) ಈಗಾಗಲೇ ಅಪಾರ ಆಸ್ತಿ-ಪಾಸ್ತಿ ನಾಶವಾಗಿದೆ. ರಾಜ್ಯದಲ್ಲಿ ಚಂಡಮಾರುತದ (Cyclone) ಆತಂಕವೂ ಎದುರಾಗಿರುವುದರಿಂದ ಆತಂಕ ಮತ್ತಷ್ಟು ಹೆಚ್ಚಾಗಿದೆ. ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯಿಂದ 681 ಮನೆಗಳಿಗೆ ಹಾನಿಯಾಗಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಚೆನ್ನೈಗೆ (Chennai Rain) ಅಪ್ಪಳಿಸುವ ಚಂಡಮಾರುತ ರಾಜ್ಯದ ಮೇಲೂ ಪ್ರಭಾವ ಬೀರಲಿದೆ ಎನ್ನಲಾಗಿದೆ.

ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಇಂದಿನಿಂದ ನ. 28ರವರೆಗೆ ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ. ತೂತುಕುಡಿ, ತಿರುನೆಲ್ವೆಲಿ, ರಾಮನಾಥಪುರಂ, ಪುದುಕ್ಕೊಟ್ಟೈ, ನಾಗಪಟ್ಟಣಂ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ತೂತುಕುಡಿ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಥೇಣಿ, ಮಧುರೈ, ಪುದುಕೊಟ್ಟೈ ಮತ್ತು ಪುದುಚೇರಿಯಲ್ಲೂ ಮಳೆ ಹೆಚ್ಚಾಗಲಿದೆ. ದಕ್ಷಿಣ ತಮಿಳುನಾಡು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತಮಿಳುನಾಡಿನಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನಾಳೆ (ಭಾನುವಾರ) ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ತಾಜಾ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತವಾಗಿ ನವೆಂಬರ್ 30ರಂದು ಚಲಿಸುವ ಸಾಧ್ಯತೆಯಿದೆ. ಈಶಾನ್ಯ ಮಾನ್ಸೂನ್ ಸೀಸನ್​ನಲ್ಲಿ ಇಲ್ಲಿಯವರೆಗೆ ಯಾವುದೇ ಚಂಡಮಾರುತ ಉಂಟಾಗಿಲ್ಲ. ಯಾವಾಗಲೂ ಆಯಾ ಋತುವಿನಲ್ಲಿ ಒಂದು ಅಥವಾ ಎರಡು ಚಂಡಮಾರುತಗಳು ಅಂಡಮಾನ್ ಸಮುದ್ರದಲ್ಲಿ ಹುಟ್ಟಿಕೊಳ್ಳುತ್ತವೆ.

ಇಂದಿನಿಂದ ನವೆಂಬರ್ 28ರವರೆಗೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಡಿಸಿಗಳು ಚಂಡಮಾರುತ ಹಾಗೂ ಮಳೆಯ ಹಾನಿಯ ನಿಯಂತ್ರಣದ ಕಡೆ ಗಮನ ನೀಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ 2 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್​ನಲ್ಲಿ ಮಳೆಯಾಗಲಿದೆ. ಇಂದು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಕ್ಕಪಕ್ಕದ ಪ್ರದೇಶಗಳು ಸಾಕ್ಷಿಯಾಗಿವೆ. ಮಳೆ-ಸಂಬಂಧಿತ ಘಟನೆಗಳಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಮತ್ತು ಸಾವು-ನೋವುಗಳು ಉಂಟಾಗಲಿವೆ. ಇದೇ ಮೊದಲ ಬಾರಿಗೆ ತುಂಗಾಭದ್ರಾ ಡ್ಯಾಂ ಇತಿಹಾಸದಲ್ಲಿ ದಾಖಲೆಯ ಮಳೆ ಹರಿದುಬಂದಿದೆ.

ಇನ್ನೆರಡು ದಿನ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಕರ್ನಾಟಕದಲ್ಲಿ ಮತ್ತೊಂದು ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಹೀಗಾಗಿ, ಇನ್ನೆರಡು ದಿನ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಈ ತಿಂಗಳ 29ರವರೆಗೂ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯಲಿದೆ.

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ತಮಿಳುನಾಡಿನಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಡಿಸೆಂಬರ್ 15ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ತಮಿಳು‌ನಾಡು, ಆಂಧ್ರಪ್ರದೇಶದಲ್ಲಿ‌ ಭಾರೀ ಮಳೆಯಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ‌ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ಇಂದಿನಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಇನ್ನೆರಡು ದಿನ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದು ಮತ್ತು ನಾಳೆ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Tamil Nadu Rain: ಮಳೆಯಿಂದ ತಮಿಳುನಾಡಿನ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳು ಬಂದ್

Karnataka Dams Water Level: ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ