Karnataka Rain: ಸೆ. 17ರವರೆಗೂ ಕರ್ನಾಟಕದಲ್ಲಿ ಮಳೆ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್

Karnataka Weather Today | ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rain: ಸೆ. 17ರವರೆಗೂ ಕರ್ನಾಟಕದಲ್ಲಿ ಮಳೆ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್
ಮಳೆ

Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದ್ದು, ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಉತ್ತರ ಮತ್ತು ನೈಋತ್ಯ ಭಾಗಗಳಲ್ಲಿ ಸೆ. 17ರವರೆಗೂ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಅಬ್ಬರ ಮಿತಿ ಮೀರಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಹೊಸನಗರದ ಖೈರಗುಂದದಲ್ಲಿ ನಿನ್ನೆ ರಾಜ್ಯದಲ್ಲೇ ದಾಖಲೆಯ 201 ಮಿ.ಮೀ. ಮಳೆಯಾಗಿದೆ.

ಹಾಗೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ಮಳೆಯ ಆರ್ಭಟ ಇರಲಿದೆ. ಭೀಮಾ ನದಿಯಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಭೀಮಾ‌ ನದಿ ತೀರಕ್ಕೆ ಯಾರೂ ತೆರಳದಂತೆ ಹಾಗೂ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಒರಿಸ್ಸಾ, ಗುಜರಾತ್, ಮಧ್ಯಪ್ರದೇಶ, ಅಸ್ಸಾಂನಲ್ಲಿ ಸೆ. 16ರವರೆಗೆ ಮಳೆಯ ಅಬ್ಬರವಿರಲಿದೆ.

ಅಂಡಮಾನ್ ನಿಕೋಬಾರ್, ಕೊಂಕಣ, ಗೋವಾ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಉತ್ತರ ಪ್ರದೇಶ, ಸಿಕ್ಕಿಂ, ಕೊಂಕಣ, ಮಿಜೋರಾಂ, ಲಕ್ಷದ್ವೀಪ, ಅಸ್ಸಾಂ, ಮೇಘಾಲಯ, ತ್ರಿಪುರ, ದೆಹಲಿ, ನಾಗಾಲ್ಯಾಂಡ್, ಮಣಿಪುರ, ತೆಲಂಗಾಣ, ಕಚ್, ವಿದರ್ಭ, ಪುದುಚೆರಿ, ಮಾಹೆ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮರಾಠವಾಡ, ಹಿಮಾಚಲಪ್ರದೇಶ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಲಡಾಖ್, ತಮಿಳುನಾಡು, ರಾಯಲಸೀಮದಲ್ಲಿ ಇಂದು ಮಳೆಯ ಅಬ್ಬರ ಜೋರಾಗಲಿದೆ. ಸೆ. 17ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಒರಿಸ್ಸಾ, ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲಿ ಚಂಡಮಾರುತ ಅಪ್ಪಳಿಸಲಿದೆ.

ಇದನ್ನೂ ಓದಿ: Karnataka Dams Water Level: ಶಿವಮೊಗ್ಗದಲ್ಲಿ ಭಾರೀ ಮಳೆಯಿಂದ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಭಾರೀ ಮಳೆಗೆ ಮಲೆನಾಡು, ಕರಾವಳಿ ತತ್ತರ; ಇನ್ನೆರಡು ದಿನ ರಾಜ್ಯಾದ್ಯಂತ ವರುಣನ ಅಬ್ಬರ

(Karnataka Weather Today: Record Rainfall in Shivamogga District Hosanagara Karnataka Rain IMD Weather Forecast)

Click on your DTH Provider to Add TV9 Kannada