Karnataka Weather Today: ಕರ್ನಾಟಕದಾದ್ಯಂತ ಭಾರೀ ಮಳೆ; ಮಲೆನಾಡು ಸೇರಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Karnataka Rain: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಾದ್ಯಂತ ಭಾರೀ ಮಳೆ; ಮಲೆನಾಡು ಸೇರಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಕಾರವಾರದಲ್ಲಿ ಎನ್​ಡಿಆರ್​ಎಫ್ ಸಿಬ್ಬಂದಿಯಿಂದ ಜನರ ರಕ್ಷಣೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 24, 2021 | 3:56 PM

ಬೆಂಗಳೂರು: ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕರ್ನಾಟಕದ (Karnataka Rains) ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕೊಡಗಿನಲ್ಲೂ ಭಾರೀ ಮಳೆಯಿಂದ ಭೂಕುಸಿತವಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗಿನ ಕೆಲವು ಹಳ್ಳಿಗಳು ಅಕ್ಷರಶಃ ದ್ವೀಪದಂತಾಗಿವೆ. ಕರ್ನಾಟಕದಲ್ಲಿ ಜುಲೈ 27ರವರೆಗೆ ವ್ಯಾಪಕ ಮಳೆಯಾಗಲಿದ್ದು, ಇನ್ನೆರಡು ದಿನ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ.

ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ, ಕುಮಟಾ, ಯಲ್ಲಾಪುರ, ಅಂಕೋಲದಲ್ಲಿ ಈ ಬಾರಿ ದಾಖಲೆಯ ಮಳೆಯಾಗಿದೆ. ಶಿವಮೊಗ್ಗದ ಹೊಸನಗರ ತಾಲೂಕಿನಲ್ಲಿ ನಿನ್ನೆ 210 ಮಿ.ಮೀ. ಮಳೆ ದಾಖಲಾಗಿದೆ. ಇದರಿಂದ ಶರಾವತಿ, ವರಾಹಿ, ಅಘನಾಶಿನಿ, ತುಂಗಾ ನದಿಗಳ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ.

ಉಳಿದಂತೆ ಕರ್ನಾಟಕದ ಪ್ರಮುಖ ನದಿಗಳಾದ ನೇತ್ರಾವತಿ, ಕಾವೇರಿ, ಭದ್ರಾ, ಕೃಷ್ಣಾ, ಕಪಿಲಾ, ಭೀಮಾ ನದಿಗಳೂ ಉಕ್ಕಿ ಹರಿಯುತ್ತಿವೆ. ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ತಲಾ ಇಬ್ಬರು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕ ಕಡೆ ಮನೆಗಳು ಕುಸಿದು ಬಿದ್ದಿವೆ. ರಸ್ತೆಗಳು ಬಂದ್ ಆಗಿವೆ. ಗುಡ್ಡ ಕುಸಿದು ಜಮೀನುಗಳು ನಾಶವಾಗಿವೆ. ಉತ್ತರ ಕರ್ನಾಟಕದಲ್ಲೂ ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 26 ಮತ್ತು 27ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಮಳೆ ಶುರುವಾಗಿದ್ದು, ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಬೆಳಗಾವಿಯ ಅಡಿಬಟ್ಟಿ ಗ್ರಾಮದಲ್ಲಿ ರಕ್ಷಣೆಗಾಗಿ ದಂಪತಿ, ಮಗು ಮೊರೆ

Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟಕ್ಕೆ 138 ಮಂದಿ ಸಾವು; ಸುರಕ್ಷಿತ ಸ್ಥಳಕ್ಕೆ 90 ಸಾವಿರ ಜನರು ಶಿಫ್ಟ್​

(Karnataka Rain Updates: Red Alert Issued in 7 Districts as Heavy Rain Lashes Malnad, Coastal Karnataka, Kodagu till July 27)

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್