Karnataka Weather Today: ಬೆಂಗಳೂರು ಸೇರಿ ಬಹುತೇಕ ಕಡೆ ಇಂದಿನಿಂದ ಗುಡುಗು ಸಹಿತ ಭಾರೀ ಮಳೆ

Karnataka Rain: ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Today: ಬೆಂಗಳೂರು ಸೇರಿ ಬಹುತೇಕ ಕಡೆ ಇಂದಿನಿಂದ ಗುಡುಗು ಸಹಿತ ಭಾರೀ ಮಳೆ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on: Oct 24, 2021 | 6:46 AM

Karnataka Rain: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ ನಿಂತಿಲ್ಲ. ಇಂದಿನಿಂದ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಅ. 26ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ, ಕೊಡಗು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 154.4 ಮಿ.ಮೀ. ಮಳೆ ದಾಖಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಕೂಡ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ, ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಕೂಡ ಅಕ್ಟೋಬರ್ 26ರವರೆಗೂ ಮಳೆ ಮುಂದುವರೆಯಲಿದೆ. ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಅಕ್ಟೋಬರ್ 25 ಮತ್ತು 26ರಂದು ವಿಪರೀತ ಮಳೆಯಾಗಲಿದೆ.

ಹವಾಮಾನ ತಜ್ಞರ ಪ್ರಕಾರ ಅ. 25 ಅಥವಾ 26ರಂದು ಹಿಂಗಾರು ಮಳೆ ಶುರುವಾಗಲಿದೆ. ಇಂದಿನಿಂದ ಅ. 26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಭಾಗಗಳು, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಬಾರಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳದಾದ್ಯಂತ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ವ್ಯಾಪಕವಾದ ಮಳೆ/ ಹಿಮಪಾತ ಮತ್ತು ಗುಡುಗು ಸಹಿತ ಬಿರುಗಾಳಿ ಉಂಟಾಗಲಿದೆ. ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ ಇದೆ.

ಇಂದು ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಉತ್ತರಾಖಂಡದಲ್ಲಿ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಪ್ರತ್ಯೇಕವಾದ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ ಇದೆ. ಈಶಾನ್ಯ ಮಾರುತದಿಂದ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Uttarakhand Rain: ಉತ್ತರಾಖಂಡದಲ್ಲಿ ಭೀಕರ ಮಳೆ; ಪ್ರವಾಹದಿಂದ 46 ಜನ ಸಾವು, 11 ಮಂದಿ ನಾಪತ್ತೆ

Bengaluru Crime: ಬೆಂಗಳೂರಿನ ಚಿನ್ನದ ಅಂಗಡಿ ದರೋಡೆ ಮಾಡಿದ್ದ ಮೂವರ ಬಂಧನ; ಇವರ ಪ್ಲಾನ್​ ಕೇಳಿದ್ರೆ ದಂಗಾಗ್ತೀರ!