Karnataka Weather Today: ಕೊಡಗು, ಬೆಂಗಳೂರು, ಕರಾವಳಿ ಸೇರಿ 16 ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಳ

Karnataka Rain: ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಮಳೆಯಿಂದ 42 ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.

Karnataka Weather Today: ಕೊಡಗು, ಬೆಂಗಳೂರು, ಕರಾವಳಿ ಸೇರಿ 16 ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಳ
ಮಳೆ

Karnataka Rain: ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ (Uttarakhand Flood), ಆಂಧ್ರಪ್ರದೇಶ (Andhra Pradesh Rain), ಕೇರಳ (Kerala Rain), ತಮಿಳುನಾಡಿನಲ್ಲಿ ಕೂಡ ಅಕ್ಟೋಬರ್ 26ರವರೆಗೂ ಮಳೆ ಮುಂದುವರೆಯಲಿದೆ. ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು, ಉತ್ತರ ಕನ್ನಡ, ಶಿವಮೊಗ್ಗ, ವಿಜಯಪುರ, ಕೊಡಗು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಮಳೆಯಿಂದ 42 ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 154.4 ಮಿ.ಮೀ. ಮಳೆ ದಾಖಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಕೂಡ ಇಂದು ಮಳೆ ಹೆಚ್ಚಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 23ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ. ನಂತರ ಅಕ್ಟೋಬರ್ 25 ಮತ್ತು 26ರಂದು ವಿಪರೀತ ಮಳೆಯಾಗಲಿದೆ. ಹವಾಮಾನ ತಜ್ಞರ ಪ್ರಕಾರ ಅ. 25 ಅಥವಾ 26ರಂದು ಹಿಂಗಾರು ಮಳೆ ಶುರುವಾಗಲಿದೆ. ಇಂದಿನಿಂದ ಅ. 26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಅ. 24ರಂದು ಮಳೆ ಕೊಂಚ ಕಡಿಮೆ ಇರಲಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕೇರಳ, ಪಶ್ಚಿಮ ಬಂಗಾಳ, ಉತ್ತರಾಖಂಡದಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿದೆ. ಮಾಹೆ, ತಮಿಳುನಾಡು, ಪುದುಚೆರಿ, ಸಿಕ್ಕಿಂನಲ್ಲೂ ಮಳೆ ಜಾಸ್ತಿಯಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಈ ವಾರ ಹಿಮಪಾತ ಉಂಟಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳ ಕಾಲ ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಉತ್ತರಾಖಂಡ, ಅರುಣಾಚಲ ಪ್ರದೇಶ, ತಮಿಳುನಾಡು, ಬಿಹಾರ, ಅಸ್ಸಾಂ, ಮೇಘಾಲಯ, ಪಂಜಾಬ್, ಲಡಾಖ್, ಮುಜಾಫಿರಾಬಾದ್, ಹಿಮಾಚಲ ಪ್ರದೇಶ, ಸಿಕ್ಕಿಂ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದ 8 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕೇರಳ, ತಮಿಳುನಾಡು, ಪುದುಚೆರಿ, ಕರೈಕಾಲ್​ನಲ್ಲಿ ಅ. 25ರವರೆಗೆ ಮಳೆ ಹೆಚ್ಚಾಗಲಿದೆ. ಕೊಲ್ಕತ್ತಾದಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಅ. 26ರವರೆಗೂ ಭಾರೀ ಮಳೆ

Uttarakhand Rain: ಉತ್ತರಾಖಂಡದಲ್ಲಿ ಭೀಕರ ಮಳೆ; ಪ್ರವಾಹದಿಂದ 46 ಜನ ಸಾವು, 11 ಮಂದಿ ನಾಪತ್ತೆ

Click on your DTH Provider to Add TV9 Kannada