Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ

Karnataka Weather: ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 11, 2022 | 6:15 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಗಾಲ (Monsoon) ಮುಗಿದು ಕೆಲವು ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ. ಇನ್ನು ಕೆಲವೆಡೆ ಸೆಖೆ ಆರಂಭವಾಗಿದ್ದು, ವಾತಾವರಣ ಪ್ರತಿ ದಿನವೂ ಬದಲಾಗುತ್ತಲೇ ಇದೆ. ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಮುಂದಿನ 2 ದಿನಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗಬಹುದು.

ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 13 ಮತ್ತು 14ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 13 ಮತ್ತು 15ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ಮುಂದುವರೆದ ಚಳಿ; ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಭಾರೀ ಮಳೆ

Weather Today: ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ