Karnataka Weather Today: ಬೆಂಗಳೂರಿನಲ್ಲಿ ಅ. 17ರವರೆಗೆ ವಿಪರೀತ ಮಳೆ; ಕರಾವಳಿಯಲ್ಲೂ ನಿಲ್ಲದ ವರುಣನ ಆರ್ಭಟ

| Updated By: ಸುಷ್ಮಾ ಚಕ್ರೆ

Updated on: Oct 13, 2021 | 6:40 AM

Karnataka Rain: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ.

Karnataka Weather Today: ಬೆಂಗಳೂರಿನಲ್ಲಿ ಅ. 17ರವರೆಗೆ ವಿಪರೀತ ಮಳೆ; ಕರಾವಳಿಯಲ್ಲೂ ನಿಲ್ಲದ ವರುಣನ ಆರ್ಭಟ
ಮಳೆ (ಸಾಂದರ್ಭಿಕ ಚಿತ್ರ)
Follow us on

Bangalore Rain: ಬೆಂಗಳೂರು: ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಬಿಡದೇ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (Heavy Rain) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru International Airport) ಸೇರಿದಂತೆ ಬಹುತೇಕ ಪ್ರದೇಶಗಳು ಕೆರೆಯಂತಾಗಿತ್ತು. ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲಾಗದೆ ವಾಹನ ಸವಾರರು ಪರದಾಡಿದರು. ನಿನ್ನೆ ಮಧ್ಯಾಹ್ನದಿಂದ ಇಂದು ಮುಂಜಾನೆಯವರೆಗೂ ಬೆಂಗಳೂರಿನಲ್ಲಿ ಮಳೆ (Bengaluru Rain) ಸುರಿದಿದೆ. ಇಂದಿನಿಂದ ಅ. 17ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಜವಾದ್ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನ ವಿಧಾನಸೌಧ, ಕೆ.ಆರ್. ಸರ್ಕಲ್, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ಬನಶಂಕರಿ, ಬಸವನಗುಡಿ, ಮತ್ತಿಕೆರೆ, ಹೆಬ್ಬಾಳ, ಅರ್​ಆರ್​ ನಗರ, ವಿಜಯನಗರ, ಹನುಮಂತನಗರ, ಹೊಸಕೆರೆಹಳ್ಳಿ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದೆ.

ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 17ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಎಡೆಬಿಡದೆ ಮಳೆ ಸುರಿದ ಪರಿಣಾಮ ಅನೇಕ ಅನಾಹುತಗಳಾಗಿವೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನಿನ್ನೆಯಿಂದ ಮತ್ತೆ ಚುರುಕಾಗಲಿರುವ ಮಳೆಯ ಅಬ್ಬರ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್‌, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನು 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ನೈಋತ್ಯ ಮುಂಗಾರು ಮುಗಿದು ಈಶಾನ್ಯ ಹಿಂಗಾರು ಮಳೆ ಶುರುವಾಗುತ್ತಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಸೆ. 30ಕ್ಕೆ ಈ ಬಾರಿಯ ಮುಂಗಾರು ಅಂತ್ಯಗೊಂಡಿದೆ. ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದು ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು ಕರ್ನಾಟಕದ ಉತ್ತರ ಒಳನಾಡು ಸೇರಿ ಪುದುಚೇರಿ, ಆಂಧ್ರ ಕರಾವಳಿ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್‌, ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ, ಕೊಂಕಣದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಕೇರಳದಲ್ಲಿ ಸುರಿದ ಮಳೆಯಿಂದ ನಿನ್ನೆ 3ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಧಾರಾಕಾರ ಮಳೆ!

Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

Published On - 6:39 am, Wed, 13 October 21