Karnataka Weather Today: ಭಾರೀ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ

Karnataka Rain: ರಾಜ್ಯದ ಉತ್ತರ ಒಳಭಾಗದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

Karnataka Weather Today: ಭಾರೀ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮಳೆ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Nov 09, 2021 | 6:45 AM

Bangalore Rain: ಬೆಂಗಳೂರು: ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ (Heavy Rain) ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಭಾರೀ ಮಳೆಯಾಗುವುದರಿಂದ ಕರಾವಳಿ, ಮಲೆನಾಡು ಸೇರಿ 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಇಂದಿನಿಂದ ನೈಋತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ಗುರುವಾರ ಅಥವಾ ಶುಕ್ರವಾರ ತಮಿಳುನಾಡಿನ ಕರಾವಳಿಯನ್ನು ಸಮೀಪಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಇಂದು ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಮತ್ತು ಗುರುವಾರ ಅತ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಬೀಳುತ್ತದೆ. ಬುಧವಾರ ಮತ್ತು ಗುರುವಾರ ಆಂಧ್ರಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುರುವಾರ ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಅದರ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಒಳಭಾಗದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ವ್ಯಾಪಕ ಸಾಧಾರಣ ಮಳೆಯ ಸಾಧ್ಯತೆಯಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು ಮತ್ತು ಪುದುಚೇರಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಗುರುವಾರದಿಂದ ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಹೆಚ್ಚಾಗಿರುತ್ತದೆ. ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡು ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕರಾವಳಿ ಕರ್ನಾಟಕ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು (ನ. 9) ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮಾ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ರಾಯಲಸೀಮಾ, ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ: Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ನ. 11ರವರೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ

Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ಹಲವು ಕಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮಾಹಿತಿ