ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನಗಳಿಂದ ಭಾರೀ ಬೇಸಿಗೆ ಮಳೆ ಸುರಿದಿದ್ದು, ಸಿಡಿಲಿಗೆ ಐವರು ಸಾವನ್ನಪ್ಪಿದ್ದಾರೆ. ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ 2 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು (Heavy Rainfall), ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಹಾಗೂ ಗುಡುಗಿನ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಿಗೂ ಮಳೆ ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.
ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.
ಮೇ 1ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಂದಿನಿಂದ ಈಶಾನ್ಯ ಭಾರತದಲ್ಲಿ ಮಿಂಚು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆಯು ಗುಜರಾತ್‌ನಲ್ಲಿ ಇಂದಿನವರೆಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಇನ್ನು 2 ದಿನ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಮುಂದಿನ 2 ದಿನಗಳಲ್ಲಿ ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಈ ಹವಾಮಾನ ಪರಿಸ್ಥಿತಿಗಳೊಂದಿಗೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ ಕೂಡ ಉಷ್ಣ ಅಲೆ ಉಂಟಾಗಲಿದೆ.
ಮುಂದಿನ 2 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಏಪ್ರಿಲ್ 29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಮಿಂಚು ಮತ್ತು ಬಿರುಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ.
ಇದನ್ನೂ ಓದಿ: ಕರ್ನಾಟಕದ ಹಲವೆಡೆ ಗಾಳಿ ಸಹಿತ ಭಾರಿ ಮಳೆ! ವಿಜಯಪುರದಲ್ಲಿ ಮನೆ ಮೇಲ್ಚಾವಣಿ ಶೀಟ್ ಮೇಲಿಟ್ಟಿದ್ದ ಕಲ್ಲು ಬಿದ್ದು ಬಾಲಕ ಸಾವು
Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ;