Karnataka Weather Today: ಕರ್ನಾಟಕದಲ್ಲಿ ಸದ್ಯಕ್ಕಂತೂ ಚಳಿ ಕಡಿಮೆಯಾಗುವ ಲಕ್ಷಣವಿಲ್ಲ; ಇಂದಿನ ಹವಾಮಾನ ಹೀಗಿದೆ

Weather Forecast: ಕರ್ನಾಟಕದಲ್ಲಿ ಫೆಬ್ರವರಿ ಮೊದಲ ವಾರದವರೆಗೂ ಚಳಿ ಮುಂದುವರೆಯುವ ನಿರೀಕ್ಷೆಯಿದೆ. ಇನ್ನೂ 1 ವಾರ ರಾಜ್ಯಾದ್ಯಂತ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ.

Karnataka Weather Today: ಕರ್ನಾಟಕದಲ್ಲಿ ಸದ್ಯಕ್ಕಂತೂ ಚಳಿ ಕಡಿಮೆಯಾಗುವ ಲಕ್ಷಣವಿಲ್ಲ; ಇಂದಿನ ಹವಾಮಾನ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: PTI
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 21, 2023 | 6:51 AM

Bengaluru Weather Updates: ಕರ್ನಾಟಕದಲ್ಲಿ ಚಳಿ ಹೆಚ್ಚುತ್ತಲೇ ಇದೆ. ಕಳೆದ ವರ್ಷಗಳಿಗಿಂತಲೂ ಈ ಬಾರಿ ತಾಪಮಾನ ಕುಸಿತ (Weather Today) ಕಂಡಿದೆ. ಗುರುವಾರ ಕರ್ನಾಟಕದಲ್ಲಿ ಒಣ ವಾತಾವರಣ ಕಂಡುಬಂದಿತ್ತು. ಫೆಬ್ರವರಿ ಮೊದಲ ವಾರದವರೆಗೂ ಚಳಿ ಮುಂದುವರೆಯುವ ನಿರೀಕ್ಷೆಯಿದೆ. ಇನ್ನೂ 1 ವಾರ ರಾಜ್ಯಾದ್ಯಂತ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯಾದ್ಯಂತ ತಾಪಮಾನ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ದಟ್ಟವಾದ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಾರಾಂತ್ಯದ ವೇಳೆಗೆ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ಗೆ ಏರಲಿದೆ. ಕರ್ನಾಟಕದ ಉತ್ತರ ಒಳನಾಡಿನ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ.

ಬಾಗಲಕೋಟೆಯಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದ್ದು, 11 ಡಿಗ್ರಿ ಸೆಲ್ಸಿಯಸ್​ ಇದೆ. ಹವಾಮಾನ ಇಲಾಖೆ ಕನಿಷ್ಠ ತಾಪಮಾನ 14 ಡಿಗ್ರಿ ಮತ್ತು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ವಾರವಿಡೀ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಇಂದು ಮಲೆನಾಡು, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಉಗುರಿನ ಆರೋಗ್ಯವನ್ನು ಕಾಪಾಡಲು ಈ ಸಲಹೆ ಪಾಲಿಸಿ

ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿಯ ಜೊತೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ 9ರಿಂದ 13 ಡಿಗ್ರಿ ಸೆಲ್ಸಿಯಸ್ ಇದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಶೀತ ಗಾಳಿ ಶುರುವಾಗಿದೆ.

ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿದಂತೆ ಹಲವು ಭಾಗದಲ್ಲಿ ಚಳಿ ಹೆಚ್ಚಾಗಿದೆ. ಹೀಗಾಗಿ, ಹವಾಮಾನ ಇಲಾಖೆ ಮುಂದಿನ 2 ದಿನ ಶೀತ ಗಾಳಿ ಅಬ್ಬರಿಸಲಿದೆ. ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ 5 ರಿಂದ6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಶೀತ ಗಾಳಿ ಬಗ್ಗೆ ಮುನ್ಸೂಚನೆ ನೀಡಿದೆ. ಅಲ್ಲದೆ, ನಿನ್ನೆ ರಾಯಚೂರು ಜಿಲ್ಲೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ 6.0 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.

ಇಂದು ಬೇರೆ ರಾಜ್ಯಗಳಲ್ಲಿ ಹವಾಮಾನ ಹೇಗಿದೆ?: ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ಹಲವೆಡೆ ಶೀತ ಅಲೆಯ ಪರಿಸ್ಥಿತಿಗಳು ಹೆಚ್ಚಳವಾಗಿವೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ ಕೆಲವು ಭಾಗಗಳು, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಕನಿಷ್ಠ ತಾಪಮಾನವು 2ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇದೆ.

ಇದನ್ನೂ ಓದಿ: Karnataka Weather Today: ಇನ್ನೂ 1 ವಾರ ಕರ್ನಾಟಕದಾದ್ಯಂತ ಚಳಿ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ

ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಅಲ್ಲಲ್ಲಿ ಹಿಮಪಾತ ಅಥವಾ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಹಿಮ ಅಥವಾ ಮಳೆಯ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಬಹುದು. ಅಸ್ಸಾಂ, ಮೇಘಾಲಯ, ತ್ರಿಪುರಾ, ಸಿಕ್ಕಿಂ, ಬಿಹಾರ, ಒಡಿಶಾ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ಉತ್ತರ ಮತ್ತು ಮಧ್ಯ ಭಾರತದಲ್ಲಿ ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗಿರುತ್ತದೆ. ಈಶಾನ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಕಳಪೆಯಾಗಿದೆ ಎಂದು ನಿರೀಕ್ಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಭಾರತದ ಕೆಲವೆಡೆ ಶೀತ ಅಲೆಗಳ ಪರಿಸ್ಥಿತಿ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಜನವರಿ 26ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಜನವರಿ 23ರಿಂದ ಜನವರಿ 25ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಜನವರಿ 22ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮೇಲೆ ಲಘುವಾಗಿ ಸಾಧಾರಣ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಜನವರಿ 23 ಮತ್ತು ಜನವರಿ 26ರ ನಡುವೆ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಜನವರಿ 23ರಿಂದ ಜನವರಿ 26ರವರೆಗೆ ಪಂಜಾಬ್, ಹರಿಯಾಣ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ