ಬೆಂಗಳೂರು: ಕರ್ನಾಟಕದಲ್ಲಿ ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ನಿನ್ನೆಗೆ ಹೋಲಿಸಿದರೆ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ. ಆದರೂ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗುತ್ತಲೇ ಇದೆ. ದಿನದಿಂದ ದಿನಕ್ಕೆ ವಾತಾವರಣದಲ್ಲಿ ಬದಲಾವಣೆ ಆಗುತ್ತಿರುವುದರಿಂದ ನೆಗಡಿ, ಜ್ವರ, ಕೆಮ್ಮು, ಉಸಿರಾಟದ ತೊಂದರೆಯಿಂದ ಜನರು ಆಸ್ಪತ್ರೆಯತ್ತ ಬರುತ್ತಿದ್ದಾರೆ.
ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.
ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 4 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಈ ಮುನ್ಸೂಚನೆ ನೀಡಿದೆ. IMD ಪ್ರಕಾರ, ದೆಹಲಿಯಲ್ಲಿ ಇಂದಿನಿಂದ ಜನವರಿ 9ರವರೆಗೆ ಮಳೆಯಾಗುತ್ತದೆ. ಇಂದಿನಿಂದ ಜನವರಿ 8ರ ಅವಧಿಯಲ್ಲಿ ಹೆಚ್ಚಿನ ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುತ್ತದೆ. ಜನವರಿ 6ರಿಂದ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ. ಇಂದು ಪಂಜಾಬ್ನಲ್ಲಿ ಮಳೆ ಹೆಚ್ಚಾಗಲಿದೆ.
ಇದನ್ನೂ ಓದಿ: South Africa vs India: ಎರಡನೇ ದಿನದಾಟಕ್ಕೆ ಇದೆಯೇ ಮಳೆಯ ಕಾಟ?: ಜೋಹನ್ಸ್ಬರ್ಗ್ ವಾತಾವರಣ ಹೇಗಿದೆ?
Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಚಳಿ ಗಾಳಿ