Karnataka Weather Today: ಇನ್ನೊಂದು ವಾರ ಕರ್ನಾಟಕದಲ್ಲಿ ವಿಪರೀತ ಚಳಿ; ಅಕಾಲಿಕ ಮಳೆಗೆ ತಮಿಳುನಾಡು ತತ್ತರ

Chennai Rain: ಇಂದು ಮತ್ತು ಜನವರಿ 1ರಂದು ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಜನವರಿ 1 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ

Karnataka Weather Today: ಇನ್ನೊಂದು ವಾರ ಕರ್ನಾಟಕದಲ್ಲಿ ವಿಪರೀತ ಚಳಿ; ಅಕಾಲಿಕ ಮಳೆಗೆ ತಮಿಳುನಾಡು ತತ್ತರ
ಚೆನ್ನೈ ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Dec 31, 2021 | 6:05 AM

ಬೆಂಗಳೂರು: 2022 ಬರಲು ಇನ್ನು ಕೇವಲ ಒಂದೇ ದಿನ ಬಾಕಿಯಿದೆ. ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿ ಹೆಚ್ಚಾಗಿದೆ. ಜನವರಿ ಮೊದಲ ವಾರದವರೆಗೂ ರಾಜ್ಯಾದ್ಯಂತ ಚಳಿ ಮುಂದುವರೆಯಲಿದೆ. ಇದರ ನಡುವೆ ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್‌ನ ಬಹುಪಾಲು ಅವಧಿಯಲ್ಲಿ ತಮಿಳುನಾಡು ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದೆ. ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ.

ಕಡಲತೀರದ ಮಾರುತಗಳು ತಮಿಳುನಾಡಿನ ಕರಾವಳಿಯ ಮೇಲೆ ದಾಳಿ ಮಾಡಲು ಸಿದ್ಧವಾಗಿವೆ. ಇದರಿಂದ ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಮತ್ತು ಜನವರಿ 1ರಂದು ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಜನವರಿ 1 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು (ಶುಕ್ರವಾರ) ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.

ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶೀತಗಾಳಿಯ ಜೊತೆಗೆ ಹಗುರ ಮಳೆಯೂ ಸುರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ (ಶುಕ್ರವಾರ) ಜನವರಿ 2ರ ಭಾನುವಾರದವರೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಜನವರಿ 2ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ನಿನ್ನೆ ಸಂಜೆ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿ ಉಂಟಾಗಲಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಹವಾಮಾನ ಸಂಸ್ಥೆ ಪ್ರಕಾರ, ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದಿನಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ.

ಗುರುವಾರ ಸುರಿದ ಭಾರಿ ಮಳೆಗೆ ಚೆನ್ನೈನ ಹಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಬಿಡುಗಡೆ ಮಾಡಿದ ಮಳೆಯ ಮಾಹಿತಿಯ ಪ್ರಕಾರ, ಚೆನ್ನೈನಲ್ಲಿ 13 ಸೆಂ.ಮೀ ಮಳೆ ದಾಖಲಾಗಿದ್ದರೆ, ನುಂಗಂಬಾಕ್ಕಂನಲ್ಲಿ 12 ಸೆಂ.ಮೀ ಮಳೆಯಾಗಿದೆ. ಇಂದು ಕಡಲೂರು, ವಿಲ್ಲುಪುರಂ ಮತ್ತು ಮೈಲಾಡುತುರೈ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆ, ಗುಡುಗುಸಹಿತ ಬಿರುಗಾಳಿ ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ತಮಿಳುನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಚಳಿ ಮುಂದುವರಿಕೆ; ಶೀತ ಗಾಳಿಯಿಂದ ಈ 5 ರಾಜ್ಯಗಳಲ್ಲಿ ಹೈ ಅಲರ್ಟ್

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಆರ್ಭಟ

ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್