Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಚಳಿ ಗಾಳಿ

Weather Forecast: ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ಇಂದಿನಿಂದ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಚಳಿ ಗಾಳಿ
ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 04, 2022 | 6:10 AM

ಬೆಂಗಳೂರು: ಕರ್ನಾಟಕದಲ್ಲಿ ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು. ಈಗ 2 ದಿನಗಳಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ಇಂದಿನಿಂದ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶ್ರೀಲಂಕಾದ ಕರಾವಳಿ, ನೈಋತ್ಯದ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿದ್ದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ವಾರವಿಡೀ ಮಳೆಯಾಗಿತ್ತು. ನೆರೆಯ ರಾಜ್ಯವಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಹೆಚ್ಚಾಗಿತ್ತು. ತಮಿಳುನಾಡಿನಲ್ಲಿ 2 ದಿನಗಳ ಹಿಂದೆ ಸುರಿದ ಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ.

ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.

ಇದನ್ನೂ ಓದಿ: Karnataka Dam Water Level: ಮಳೆ ಹಿನ್ನೆಲೆ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆ ಬಗ್ಗೆ ಹೆಚ್ಚಿನ ಯೋಚನೆ ಅಗತ್ಯ ಇಲ್ಲ; ಪರಿಹಾರಕ್ಕಾಗಿ ತೆಂಗಿನ ಎಣ್ಣೆ ಬಳಸಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್