ಬೆಂಗಳೂರು: ಕರ್ನಾಟಕದಲ್ಲಿ ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು. ಈಗ 2 ದಿನಗಳಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಆದರೆ, ಇಂದಿನಿಂದ ರಾಜ್ಯಾದ್ಯಂತ ಚಳಿಯೂ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶ್ರೀಲಂಕಾದ ಕರಾವಳಿ, ನೈಋತ್ಯದ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿದ್ದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ವಾರವಿಡೀ ಮಳೆಯಾಗಿತ್ತು. ನೆರೆಯ ರಾಜ್ಯವಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಹೆಚ್ಚಾಗಿತ್ತು. ತಮಿಳುನಾಡಿನಲ್ಲಿ 2 ದಿನಗಳ ಹಿಂದೆ ಸುರಿದ ಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ.
ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.
ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.
ಇದನ್ನೂ ಓದಿ: Karnataka Dam Water Level: ಮಳೆ ಹಿನ್ನೆಲೆ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆ ಬಗ್ಗೆ ಹೆಚ್ಚಿನ ಯೋಚನೆ ಅಗತ್ಯ ಇಲ್ಲ; ಪರಿಹಾರಕ್ಕಾಗಿ ತೆಂಗಿನ ಎಣ್ಣೆ ಬಳಸಿ