Karnataka Weather Today: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ, ಚಳಿಗಾಳಿ ಸಾಧ್ಯತೆ
Karnataka Rain: ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದು ಮತ್ತು ಡಿಸೆಂಬರ್ 18ರಂದು ಒಣ ಹವೆ ಮುಂದುವರೆಯಲಿದೆ.
Bengaluru Rain: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.
ಇಂದು ಕರ್ನಾಟಕ ಮಾತ್ರವಲ್ಲದೆ ಬೆಳಿಗ್ಗೆ, ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇನ್ನೂ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.
ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಇಂದು ಒಣಹವೆ ಇರಲಿದೆ. ಪೂರ್ವ ಮಾರುತಗಳು ಮತ್ತು ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಒಣಹವೆ ಇರಲಿದೆ. ಕರಾವಳಿಯಲ್ಲಿಂದು ಮಳೆಯಾಗಲಿದೆ. ಕರಾವಳಿಯಲ್ಲಿ ಡಿಸೆಂಬರ್ 18ರವರೆಗೆ ಶುಷ್ಕ ವಾತಾವರಣವಿರಲಿದೆ. ಆದರೂ ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದು ಮತ್ತು ಡಿಸೆಂಬರ್ 18ರಂದು ಒಣ ಹವೆ ಮುಂದುವರೆಯಲಿದೆ.
ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದಿನಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಇಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ದಿನ ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ.
IMD ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 6-10 ಡಿಗ್ರಿ ಸೆಲ್ಷಿಯಸ್ ಇರಲಿದೆ. ಇಂದಿನಿಂದ ಈಶಾನ್ಯ ತ್ರಿಪುರ, ವಾಯುವ್ಯ ಮಿಜೋರಾಂ, ದಕ್ಷಿಣ ಅಸ್ಸಾಂ ಮತ್ತು ಈಶಾನ್ಯ ಅರುಣಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.
ಡಿಸೆಂಬರ್ 19ರವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಡಿಸೆಂಬರ್ 19ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ; ನೆರೆಯ ರಾಜ್ಯಗಳಲ್ಲೂ ವರುಣನ ಆರ್ಭಟ
Karnataka Weather Today: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ; ಕರಾವಳಿಯಲ್ಲಿ ಒಣಹವೆ