Karnataka Weather: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಆರ್ಭಟ; ಮಲೆನಾಡು, ಕರಾವಳಿ ಭಾಗದಲ್ಲಿ ಇಂದು ಯೆಲ್ಲೋ ಅಲರ್ಟ್​

ಮುಂಬೈನಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಲಿದೆ.

Karnataka Weather: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಆರ್ಭಟ; ಮಲೆನಾಡು, ಕರಾವಳಿ ಭಾಗದಲ್ಲಿ ಇಂದು ಯೆಲ್ಲೋ ಅಲರ್ಟ್​
ಹವಾಮಾನ ವರದಿ
Follow us
TV9 Web
| Updated By: Digi Tech Desk

Updated on:Jun 22, 2021 | 9:17 AM

ಬೆಂಗಳೂರು: ಮಳೆಗಾಲದ ಆರಂಭದಲ್ಲೇ ಅಬ್ಬರಿಸಿ, ಧಾರಾಕಾರವಾಗಿ ಸುರಿದ ಮಳೆ ಕೊಂಚ ಶಾಂತವಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿದು ಕೃಷಿಕರ ನಿದ್ದೆಗೆಡಿಸಿದ್ದ ಮಳೆಗೆ ಹಿಡಿಶಾಪ ಹಾಕಿದವರೇ ಹೆಚ್ಚು. ಶುರುವಿನಲ್ಲೇ ಹೀಗಾದರೆ ನಂತರದ ಪರಿಸ್ಥಿತಿ ಏನು ಎಂದು ಎಲ್ಲರನ್ನೂ ಚಿಂತೆಗೆ ಸಿಲುಕಿಸಿದ್ದ ವರುಣ ಸದ್ಯ ಕೊಂಚ ಬಿಡುವು ನೀಡಿದ್ದರೂ ಹವಾಮಾನ ಇಲಾಖೆಯ ಪ್ರಕಾರ ಇಂದು ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿಯೇ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇಂದು (ಜೂನ್​ 22) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿ ತೀರದ ಈ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದ್ದು, ಸದ್ಯ 2 ದಿನಗಳಿಂದ ಸ್ವಲ್ಪ ಬಿಡುವು ಸಿಕ್ಕಿದೆ. ಅಲ್ಲದೇ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಸದರಿ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ. ಇನ್ನುಳಿದ ಭಾಗಗಳಲ್ಲಿ ಇಂದಿನಿಂದ ಮಳೆಯ ಅಬ್ಬರ ಕಡಿಮೆಯಾಗುವ ಸಾಧ್ಯತೆಯಿದೆ.

ಇತ್ತ ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿ ನೀರಿನ ಹರಿವು ಹೆಚ್ಚಾಗಿ, ಪ್ರವಾಹದ ಭೀತಿ ಎದುರಾಗಿದೆ. ಮುಂಬೈನಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಲಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ಈಗಾಗಲೇ ತುಂಗಾ, ಭದ್ರಾ, ಶರಾವತಿ, ವಾರಾಹಿ, ವರದಾ, ಅಘನಾಶಿನಿ ನದಿಗಳು ಮೈದುಂಬಿ ಹರಿಯುತ್ತಿವೆ. ಮಲೆನಾಡಿನ ಆಕರ್ಷಣೀಯ ತಾಣವಾದ ಜೋಗ ಜಲಪಾತವೂ ಭೋರ್ಗರೆದು ಧುಮ್ಮಿಕ್ಕುತ್ತಿದೆ. ಜತೆಗೆ, ಇನ್ನೂ ಹಲವು ಜಲಪಾತಗಳಿಗೆ ಜೀವಕಳೆ ಬಂದಿದ್ದು, ಕಣ್ಮನ ಸೆಳೆಯುತ್ತಿವೆ.

ಮಹಾರಾಷ್ಟ್ರ ಡ್ಯಾಂನಿಂದ ಕರ್ನಾಟಕದತ್ತ ನೀರು ಬಿಡುವುದಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಮಾಲೋಚನ ಸಭೆ ಏರ್ಪಡಿಸಲಾಗಿತ್ತು. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆಯಲ್ಲಿ ನೀರು ಬಿಡುಗಡೆಯ ಬಗ್ಗೆ ಕೂಡಲೇ ಮಾಹಿತಿ ನೀಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಗೆ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಜರಾಗಿದ್ದರು. ಇದರಲ್ಲಿ ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಡ್ಯಾಂನಿಂದ ಕರ್ನಾಟಕಕ್ಕೆ ನೀರು ಬಿಡುವ ವಿಚಾರ: ಸಮನ್ವಯ ಸಾಧಿಸಿ, ನೆರೆ ತಪ್ಪಿಸಲು ಎರಡು ರಾಜ್ಯಗಳೂ ಒಪ್ಪಿಗೆ 

ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳು

Published On - 8:38 am, Tue, 22 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್