AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ಅ. 4ರವರೆಗೆ ವ್ಯಾಪಕ ಮಳೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ಇಂದಿನಿಂದ 4 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

TV9 Web
| Edited By: |

Updated on: Oct 01, 2021 | 6:40 AM

Share

Karnataka Rain: ಭಾರತದಲ್ಲಿ ಇಂದಿನಿಂದ ಶಾಹೀನ್ ಚಂಡಮಾರುತದ (Shaheen Cyclone) ಪ್ರವೇಶವಾಗಲಿದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದಿನಿಂದ ಅ. 4ರವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದಿನಿಂದ 4 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಹಾಗೇ, ಕೊಡಗು ಜಿಲ್ಲೆಯಲ್ಲಿ ಇನ್ನೆರಡು ದಿನದ ಬಳಿಕ ಮಳೆ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ.

ಇಂದು ಗುಜರಾತ್​ ಕರಾವಳಿ ತೀರಕ್ಕೆ ಶಾಹೀನ್ ಚಂಡಮಾರುತ ಅಪ್ಪಳಿಸಲಿದೆ. ಬಳಿಕ ಆ ಚಂಡಮಾರುತ ಪಾಕಿಸ್ತಾನದತ್ತ ತೆರಳಲಿದೆ. ಆದರೂ ಇಂದು ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒರಿಸ್ಸಾ, ಬಿಹಾರ್, ಕೊಂಕಣ, ಕೇರಳ, ತೆಲಂಗಾಣ, ಛತ್ತೀಸ್​ಗಢ, ವಿದರ್ಭ, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಗೋವಾ, ಮಾಹೆ, ಲಕ್ಷದ್ವೀಪ, ಕರ್ನಾಟಕ, ರಾಯಲಸೀಮೆ, ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಮಧ್ಯಪ್ರದೇಶದಲ್ಲಿ ಮಳೆ ಹೆಚ್ಚಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ. ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಇಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ. ಕೇರಳ, ತಮಿಳುನಾಡಿನಲ್ಲಿ ಕೂಡ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.

ಶಾಹೀನ್ ಚಂಡಮಾರುತ ಭಾರತದ ಕರಾವಳಿ ತೀರಗಳಿಗೆ ಅಪ್ಪಳಿಸಿದರೂ ಅದರ ಪರಿಣಾಮ ಹೆಚ್ಚಾಗಿ ಇರುವುದಿಲ್ಲ. ಆದರೆ, ಪಾಕಿಸ್ತಾನ, ಇರಾನ್ ದೇಶಗಳಲ್ಲಿ ಈ ಚಂಡಮಾರುತ ತೀವ್ರ ಪರಿಣಾಮ ಉಂಟುಮಾಡಲಿದೆ. ಗುಜರಾತ್​ನಿಂದ ಪಾಕಿಸ್ತಾನ- ಮಕ್ರನ್ ಕರಾವಳಿ ತೀರದ ಕಡೆಗೆ ಶಾಹೀನ್ ಚಂಡಮಾರುತ ಚಲಿಸಲಿದೆ. ಇನ್ನು ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಕೇರಳ, ತಮಿಳುನಾಡು, ಕರ್ನಾಟಕದ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತದ ಪರಿಣಾಮ ಕೊಂಚ ಮಟ್ಟಿಗೆ ಇರಲಿದೆ. ಈ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್

Karnataka Weather Today: ಬೆಂಗಳೂರು, ಶಿವಮೊಗ್ಗ, ಕೊಡಗು, ಕರಾವಳಿಯಲ್ಲಿ ಅ. 3ರವರೆಗೂ ಭಾರೀ ಮಳೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​