Karnataka Weather Today: ಕರಾವಳಿಯಲ್ಲಿ 3 ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ
Karnataka Rain: ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಇಂದು ಮತ್ತು ಶುಕ್ರವಾರ ಹಳದಿ ಅಲರ್ಟ್ ನೀಡಲಾಗಿದೆ.
Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನವೆಂಬರ್ 20ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಇಂದಿನಿಂದ ನವೆಂಬರ್ 20ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಶುಕ್ರವಾರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳಕ್ಕೆ ಹಳದಿ ಅಲರ್ಟ್ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಇಂದು ಮತ್ತು ಶುಕ್ರವಾರ ಹಳದಿ ಅಲರ್ಟ್ ನೀಡಲಾಗಿದೆ. ಇದಲ್ಲದೆ, ಶನಿವಾರ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಚಳಿಗಾಲದ ನಡುವೆಯೂ ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ 3 ದಿನ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರಾವಳಿ, ಮಲೆನಾಡು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ತುಮಕೂರಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದರ ಜೊತೆಗೆ, ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲದೆ ಗೋವಾ, ಮಹಾರಾಷ್ಟ್ರ ಮತ್ತು ಕೊಂಕಣದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ. ತಮಿಳುನಾಡು, ಕರ್ನಾಟಕ ಮತ್ತು ಕೇರಳ ಇತರ ರಾಜ್ಯಗಳಲ್ಲಿ ಅತ್ಯಂತ ಭಾರೀ ಮಳೆಯು ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಲ್ಲಿ ನವೆಂಬರ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ರಾಯಲಸೀಮಾದಲ್ಲಿ ನವೆಂಬರ್ 19ರವರೆಗೆ ಮಳೆಯಾಗಲಿದೆ. ಇಂದು ಮತ್ತು ನಾಳೆ ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 19ರಂದು ಕೇರಳ, ಒಡಿಶಾ ಮತ್ತು ಪುದುಚೇರಿ, ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 20ರಂದು ಕೂಡ ಈ ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 19ರವರೆಗೆ ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಸಂಸ್ಥೆಯ ಪ್ರಕಾರ, ವಾರದಲ್ಲಿ ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಚೆನ್ನೈ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ತಿರುವಳ್ಳೂರ್‌ಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಇಂದು ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ. ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ಮಳೆಯ ಅಬ್ಬರ; ಚೆನ್ನೈ ಸೇರಿ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಸಾಧ್ಯತೆ! ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?