AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​, ಕರಾವಳಿಯಲ್ಲಿ ಕಟ್ಟೆಚ್ಚರ

Karnataka Weather Tomorrow: ಮೊಂತಾ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ನಾಳೆಯೂ ಮಳೆ ಮುಂದುವರಿಯಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​, ಕರಾವಳಿಯಲ್ಲಿ ಕಟ್ಟೆಚ್ಚರ
ಮಳೆ
ಪ್ರಸನ್ನ ಹೆಗಡೆ
|

Updated on: Oct 28, 2025 | 5:48 PM

Share

ಬೆಂಗಳೂರು, ಅಕ್ಟೋಬರ್​ 28: ಮೊಂತಾ ಚಂಡಮಾರುತದ (Cyclone Montha) ಎಫೆಕ್ಟ್​​ ಹಿನ್ನಲೆ ರಾಜ್ಯದಲ್ಲಿ ನಾಳೆಯೂ ಮಳೆ ಮುಂದುವರಿಯಲಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಿ ಇರಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ವಿಪರೀತ ಗಾಳಿ ಇರಲಿದೆ. ರಾಜಧಾನಿ ಬೆಂಗಳೂರಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್​, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗಕ್ಕೆ ವರುಣ ಕೊಂಚ ರಿಲೀಫ್​ ನೀಡಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಸಣ್ಣ ಮಳೆಯಾಗುವ ಸಂಭವ ಇದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆಯಾದರೂ ವಿಪರೀತ ಗಾಳಿ ಇರಲಿದೆ. ಗಾಳಿಯ ವೇಗ ಗಂಟೆಗೆ 40–50 ಕಿ.ಮೀ. ಇರಲಿದ್ದು, 60 ಕಿ.ಮೀ.ವರೆಗೂ ತಲುಪಬಹುದೆಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಮೊಂತಾ ಸೈಕ್ಲೋನ್ ಪ್ರಭಾವ: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ದಿನ ಮಳೆ? ಹವಾಮಾನ ತಜ್ಞರು ಹೇಳಿದ್ದಿಷ್ಟು

ಬೆಂಗಳೂರಲ್ಲಿ ಮಳೆ ಸಾಧ್ಯತೆ ಕಡಿಮೆ

ಬೆಂಗಳೂರು ನಗರದಲ್ಲಿ ನಾಳೆ ಕೊಂಚ ಮಟ್ಟಿಗೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಗಾಳಿಯ ವೇಗ ಗಂಟೆಗೆ 15-25 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?